DK Suresh blasted explosive bomb about CM position

ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh

ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದೆಡೆ ಮುಡಾ ಹಗರಣ ಸದ್ದು ಮಾಡುತ್ತಿದ್ದು, ಇನ್ನೊಂದೆಡೆ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ, ಈ ಕುರಿತು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಕೇಳುವುದರಲ್ಲಿ ತಪ್ಪಿಲ್ಲ ಎಂದು ಡಿಕೆ ಸುರೇಶ್ ಮಾರ್ಮಿಕವಾಗಿ ನುಡಿದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನವರು ಅವರ ಪಕ್ಷ ಉಳಿಸಿಕೊಳ್ಳಲು ಏನಾದ್ರೂ ಹೇಳ್ತಾರೆ. ಬಲಿಷ್ಠ ಸರ್ಕಾರವಿದೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ನಾಯಕತ್ವವಿದೆ ಎಂದಿದ್ದಾರೆ.

ಯಾರು ಏನೇ ಪ್ರಯತ್ನ ಪಟ್ಟರೂ ಖಂಡಿತ ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣ ಇರುತ್ತದೆ. ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರ್ತಾರೆ. ಈ ಬಗ್ಗೆ ಡಿಸಿಎಂ ಅವರೇ ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್‌ರ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕುತಂತ್ರ ನಡೆದಿದೆ. ರಾಜ್ಯಪಾಲರ ಮುಂದೆ ಹಳೇ ಪ್ರಕರಣಗಳು ಬಾಕಿ ಇದ್ದರೂ ಸದ್ದು ಮಾಡ್ತಿಲ್ಲ. ಕಾಂಗ್ರೆಸ್ ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Suicide news: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮಹತ್ಯೆ!

ಚನ್ನಪಟ್ಟಣ ಉಪಚುನಾವಣೆ ವಿಚಾರ ಪ್ರಸ್ತಾಪಿಸಿ, ಸಿಪಿವೈ ನಮ್ಮ ಪಕ್ಷದವರಲ್ಲ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷ ಅವರನ್ನು ನೋಡಿದೆ. ಈಗ ಎಲ್ಲಿದ್ದಾರೆ ಅಲ್ಲಿಯೇ ಯಶಸ್ಸು ಸಿಗಲಿ. ಒಮ್ಮೆ ಸ್ವತಂತ್ರ ಅಭ್ಯರ್ಥಿ ಅಂತಾರೆ. ಇನ್ನೊಮ್ಮೆ ಜೆಡಿಎಸ್‌ಗೆ ಬಿಟ್ಟುಕೊಡ್ತೇನೆ ಅಂತಾರೆ. ಕಾಂಗ್ರೆಸ್ ಗೆ ಸಿಪಿವೈಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ