ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ ಸಾಲಿನ ಸ್ನೇಹಸಿರಿ ಗೆಳೆಯರ ಬಳಗವು ರವಿವಾರ ಏರ್ಪಡಿಸಿದ್ದ ಪರಿವಾರದ ಸಮಾಗಮ, ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮವು ವೈಚಾರಿಕತೆಯಿಂದ ಕೂಡಿರುವ ವಿಶೇಷ ಕಾರ್ಯಕ್ರಮವಾಗಿದೆ.. ಸ್ನೇಹರಿಸಿ ಗೆಳೆಯರ ಬಳಗವು ನಗುವಿನ ಭಂಡಾರವಾಗಿರಲಿ.ಸಹಕಾರ, ಸಹನೆ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಗೆಳೆತನದ ಮಹತ್ವ ಸಾರುವ ಪರಿವಾರ ಸಮಾಗಮದಂಥ ಕಾರ್ಯಕ್ರಮಗಳು ಹೆಚ್ಚು ಅಗತ್ಯವಾಗಿವೆ. ಗೆಳೆತನದಲ್ಲಿ ಮನಸ್ಸು ದೊಡ್ಡದಾಗಿರಬೇಕು, ವಿಶಾಲವಾಗಿರಬೇಕು. ದೂರಾಲೋಚನೆ, ದೂರದೃಷ್ಟಿ ಇರಬೇಕು ಎಂದು ಹೇಳಿದರು.

ಹಿರಿಯ ಸಾಹಿತಿ ಅಶೋಕ ಮಣಿ ಮಾತನಾಡಿ, ದೇಶದ ಸಂಸ್ಕೃತಿಯು ಒಂದಾಗಿ, ಚನ್ನಾಗಿ ಬದುಕುವುದರಲ್ಲಿದೆ. ಗೆಳೆತನದ ಮಹತ್ವ, ಪ್ರೀತಿಯನ್ನು ಮಕ್ಕಳಿಗೂ ಹಂಚಿಕೊಳ್ಳಬೇಕು ಎಂದು ಹೇಳಿದರು.

ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಶಿವಾನಂದ ಬಿರಾದಾರ, ಮೋಹನ್ ಬಿಗ್ ಸೇಲನ ಮುಖ್ಯಸ್ಥೆ ಪ್ರೇಮಲಾಬಾಯಿ ಹಂಚಾಟೆ, ವಿಜಯಪುರದ ಗುತ್ತಿಗೆದಾರ ಸೋಮನಾಥ ಸೂಳಿಭಾವಿ, ಗೆಳೆಯರ ಬಳಗದ ರಾಜೇಂದ್ರಕುಮಾರ ದಂಡಾವತಿ, ಉಮೇಶ ಕಂಠಿ, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ಇದ್ದರು.

ವಿವಿಧ ಪರೀಕ್ಷೆಗಳಲ್ಲಿ ಹೆಚ್ಚು ಅಂಕದೊAದಿಗೆ ಸಾಧನೆ ತೋರಿದ ವಿದ್ಯಾರ್ಥಿಗಳಾದ ಸಿಂಚನಾ ಸಿದ್ರಾಮೇಶ ಉಪನಾಳ, ಬೀಬಿಆಯಿಷಾ ಬುರಾನಸಾಬ ರುದ್ರವಾಡಿ, ಪವಿತ್ರಾ ದೌಲತರಾಯ ವಡವಡಗಿ, ದಿಶಾ ಮಂಗಸೂಳಿ, ಗಿರೀಶ ಶ್ರೀಶೈಲ ಸಿದ್ದಾಪುರ ಸೇರಿದಂತೆ ಗೆಳೆಯರ ಬಳಗದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಸ್ನೇಹಿತರ ಬಳಗದ ಸದಸ್ಯರನ್ನು ಸನ್ಮಾನಿಸಲಾಯಿತು. ಮಾಣಿಕಚಂದ ದಂಡಾವತಿ,ಮಲ್ಲಪ್ಪ ಕಲ್ಲಪ್ಪಗೋಳ,ಶಿವಾನಂದ ಮಂಗಸೂಳಿ, ಸಿದ್ರಾಮೇಶ ಉಪನಾಳ, ಶ್ರೀಶೈಲ ಸಿದ್ದಾಪುರ, ಮೋಹನ್ ಹಂಚಾಟೆ, ರವಿ ಝಿಂಗಾಡೆ, ಬಸವರಾಜ ಗುರವ, ಎಂ.ಬಿ.ಪಾಟೀಲ, ರಾಘವೇಂದ್ರ ಬಡಿಗೇರ, ಪ್ರಭು ಮಂಗಸೂಳಿ, ಶ್ರೀಶೈಲ ಬಿಜ್ಜರಗಿ, ಅರುಣಕುಮಾರ ಹುನಗುಂದ, ಮಹಾಂತೇಶ ಕುಂಟೋಜಿ, ಎಸ್.ಐ.ಪಲ್ಲೇದ, ಬಸವರಾಜ ಬಡಿಗೇರ, ನಿಂಗಪ್ಪ ಚಟ್ಟೇರ, ಅಬ್ದುಲರಹೆಮಾನ ನದಾಫ, ಶಿವಪುತ್ರ ಅಜಮನಿ, ಈರಯ್ಯ ಹಿರೇಮಠ, ಶ್ರೀಕಾಂತ ಹಡಲಗೇರಿ ಸೇರಿದಂತೆ 100ಕ್ಕೂ ಹೆಚ್ಚು ಬಳಗದ ಸದಸ್ಯರು ಪಾಲ್ಗೊಂಡಿದ್ದರು.ದಾನಮ್ಮ ಪ್ರಾರ್ಥಿಸಿದರು. ಸಾಹಿತಿ ಬುರಾನ್ ರುದ್ರವಾಡಿ ಸ್ವಾಗತಿಸಿದರು. ವೆಂಕನಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಬಿ.ವಡವಡಗಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ನಶೆಮುಕ್ತ ಮಹಾಅಭಿಯಾನ:
ಇದೇ ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಓಂಶಾoತಿ ಭವನದ ವತಿಯಿಂದ ನಶೆಮುಕ್ತರಾಗುವ ಪ್ರತಿಜ್ಞಾ ಅಭಿಯಾನ ಏರ್ಪಡಿಸಲಾಗಿತ್ತು. ಬಿಕೆ ಶೋಭಾ ಅಕ್ಕನವರು ಮಾತನಾಡಿ ದಾದಿ ಪ್ರಕಾಶಮಣೀಜಿಯವರ ಸ್ಮರಣಾರ್ಥ ನಶೆಮುಕ್ತ ಭಾರತ ಅಭಿಯಾನ ಮತ್ತು ಮಿಷನ್ ಸ್ಪಂಧನ ಅಡಿಯಲ್ಲಿ ವಿಕಸಿತ ಭಾರತದತ್ತ ಒಂದು ಸಬಲವಾದ ಹೆಜ್ಜೆ ಇಡಲು 10 ಕೋಟಿ ನಶೆಮುಕ್ತರಾಗುವ ಪ್ರತಿಜ್ಞಎಗಳ ಮಹಾಅಭಿಯಾನ ದೇಶದ ಎಲ್ಲೆಡೆ ನಡೆಯುತ್ತಿದೆ. ಯಾವ್ಯಾವುದೋ ಕಾರಣಗಳಿಂದಾಗಿ ನಸೆಗೆ ದಾಸರಾಗಿರುವವರು ಈ ಕೂಡಲೇ ಅದನ್ನು ತ್ಯಜಿಸುವ ದೃಢಸಂಕಲ್ಪ ಮಾಡಬೇಕು. ಒಂದೂವರೆ ಇಂಚಿನ ಸಿಗರೇಟು ಐದೂವರೆ ಆರು ಅಡಿಯ ದೇಹವನ್ನು ನಾಶಮಾಡುತ್ತದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ