Do not be unfair to the sportspersons

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ ನಿಜವಾದ ಪ್ರತಿಭೆಯ ಮೇಲೆ ಆಯ್ಕೆ ಮಾಡಿ ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರದ್ದಾಗಿದೆ ಎಂದು ಬಿಇಒ ಬಿ. ಎಸ್. ಸಾವಳಗಿ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಆರ್.ಎಂ.ಎಸ್.ಎ ಶಾಲೆಯಲ್ಲಿ ಗುರುವಾರ ನಡೆದ ದೈಹಿಕ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಎನ್ನುವಂತೆ ಒಳ್ಳೆಯ ಮತ್ತು ನಿಜವಾದ ಕ್ರೀಡಾಪಟುವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದರು.

ದೈಹಿಕ ಶಿಕ್ಷಣ ಪರಿವೀಕ್ಷಕ ಬಿ. ವೈ. ಕವಡಿ ಮಾತನಾಡಿ, ವಲಯ ಮತ್ತು ಕ್ಲಸ್ಟರ್ ಹಂತದಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುವಿನ ಅರ್ಹತೆ ಫಾರ್ಮ್ ಎಸ್‌ಎಟಿಎಸ್ ನಂಬರ್, ತರಗತಿ, ದಾಖಲಾತಿ ಸಂಖ್ಯೆ ಮುಖ್ಯ ಶಿಕ್ಷಕರ ಸಹಿಯೊಂದಿಗೆ ಫೋಟೋ ಲಗತಿಸಿಕೊಂಡು ಕ್ರೀಡಾಕೂಟಕ್ಕೆ ಕರೆದುಕೊಂಡು ಬರುವುದರಿಂದ ಕ್ರೀಡೆಗೆ ಒಂದು ಬೆಲೆ ಸಿಗುವುದು. ಕ್ರೀಡೆಯಲ್ಲಿ ಯಾವುದೇ ತಂಟೆ ತಕರಾರುಗಳು ಆಗುವುದಿಲ್ಲ ಎಂದರು.

ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಸುರೇಶ ಆಲೂರು, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಖಜಾಂಚಿ ಬಿ. ಎಸ್. ಹೊಳಿ, ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎ. ಸಿ. ಕೆರೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಸಜ್ಜನ ಇದ್ದರು.ತಾಲ್ಲೂಕಿನ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ