ಬಾಗಲಕೋಟೆ: ಕೇಂದ್ರ ಸರ್ಕಾರ ವೈದ್ಯರ ರಕ್ಷಣೆಗೆ (Doctors Protest) ಹೊಸ ಕಾನೂನನ್ನ ರೂಪಿಸಬೇಕೆಂದು ಬಾಗಲಕೋಟೆ ನಗರದ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ.ಶೇಖರ್ ಮಾನೆ ಅವರು ಒತ್ತಾಯಿಸಿದ್ದಾರೆ.
ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂದೆ ಕೊಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ನಗರದ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ (Doctors Protest) ನಡೆಸಿದರು.
Join Our Telegram: https://t.me/dcgkannada
ಘೋಷಣಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಡಿಸಿಯವರ ಮೂಲಕ ಸರ್ಕಾರಕ್ಕೆ ಮನವಿಬಸಲ್ಲಿಸಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶೇಖರ್ ಮಾನೆ ಅವರು, ವೈದ್ಯರ ರಕ್ಷಣೆಗೆ ಕೇಂದ್ರ ಸರ್ಕಾರ ಹೊಸ ಸರ್ಕಾರ ರೂಪಿಸವೇಕೆಂದು ಆಗ್ರಹಿಸಿದರು.
ನಗರದ ವೈದ್ಯರು,ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಆಸ್ಪತ್ರೆಯ ಓಪಿಡಿ ಬಂದ್ ಮಾಡಿ ಪ್ರತಿಭಟನೆ:
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)
ಇನ್ನು ಜಿಲ್ಲಾಸ್ಪತ್ರೆಯಲ್ಲಿ ಓಪಿಡಿ ಬಂದಾಗಿದ್ದು, ಕೇವಲ ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದೆ. ಜಿಲ್ಲಾಸ್ಪತ್ರೆ ಮುಂದೆ ವೈದ್ಯರು, ಜಿಲ್ಲಾಸ್ಪತ್ರೆ ಸಿಬ್ಬಂದಿ,ವವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಡಿಸಿಯವರ ಮೂಲಕ ಸರ್ಕಾರಕ್ಕೆ ಮನಬಿ ಸಲ್ಲಿಸಿದರು.