ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide)

ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ ಎಸಗಿದ್ದ ಬಗ್ಗೆ ಮಾಹಿತಿಯನ್ನೂ ನೀಡಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಸ್ವತ್ತು ವಶಕ್ಕೆ ಎಸ್‌ಐ ನಾಗರಾಜಪ್ಪ ನೇತೃತ್ವದಲ್ಲಿ ತೆರಳಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂ. 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ಅವರು, ಜುಲೈ 1ರ ನಸುಕಿನಲ್ಲಿ ಮನೆಯನ್ನು ತೊರೆದಿದ್ದರು ಎನ್ನಲಾಗಿದೆ.

ಜೂ. 30ರ ರಾತ್ರಿ 9 ಗಂಟೆಯ ಹೊತ್ತಿಗೆ ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಗಲಾಟೆ ನಡೆಯಿತು. ಇದರಿಂದ ಬೇಸರ ಮಾಡಿಕೊಂಡ ಅವರು ನಸುಕಿನ 2 ಗಂಟೆಯ ಹೊತ್ತಿಗೆ ಮನೆಯಿಂದ ಹೊರಹೋಗಿದ್ದರು. ಮನೆಗೂ ಮರಳದೇ ಕರ್ತವ್ಯಕ್ಕೂ ಹಾಜರಾಗದ ಇರುವುದು ಆತಂಕ ಮೂಡಿಸಿದೆ. ಕಾಣೆಯಾಗಿರುವ ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಕೆ.ಇ. ಲಲಿತಾ ಅವರು ಕೆಟಿಜೆ ನಗರ ಠಾಣೆಗೆ ಜುಲೈ 2ರಂದು ದೂರು ದಾಖಲಿಸಿದ್ದರು.

ದಾವಣಗೆರೆ ತಾಲ್ಲೂಕಿನ ಜವಳಘಟ್ಟ ಗ್ರಾಮದ ನಾಗರಾಜಪ್ಪ, 1993ರಲ್ಲಿ ಪೊಲೀಸ್‌ ಇಲಾಖೆ ಸೇರಿದ್ದರು. ಕಾನ್‌ಸ್ಟೆಬಲ್‌ ಆಗಿ ಚಿತ್ರದುರ್ಗದಿಂದ ಕರ್ತವ್ಯ ಆರಂಭಿಸಿದ ಅವರು ಹಲವು ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ದಾವಣಗೆರೆಯ ಸಂಚಾರ ಪೊಲೀಸ್‌ ಠಾಣೆ, ಬಸವನಗರ ಠಾಣೆಯಲ್ಲಿ ಕೆಲಸ ಮಾಡಿ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು. ಇತ್ತೀಚೆಗೆ ಬಡಾವಣೆ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ನಿವೃತ್ತಿಯ ಅಂಚಿನಲ್ಲಿದ್ದರು.

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಲಲಿತಾ ಅವರನ್ನು ನಾಗರಾಜಪ್ಪ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ನಿಟುವಳ್ಳಿಯ ಪೊಲೀಸ್‌ ವಸತಿ ಗೃಹದಲ್ಲಿ ನೆಲೆಸಿದ್ದರು. ಇಬ್ಬರು ಮಕ್ಕಳ ಪೈಕಿ ಪುತ್ರಿಯ ವಿವಾಹವಾಗಿದೆ. 8 ತಿಂಗಳ ತುಂಬು ಗರ್ಭಿಣಿಯಾಗಿರುವ ಪುತ್ರಿ ಹೆರಿಗೆಗೆ ಇತ್ತೀಚೆಗೆ ತವರು ಮನೆಗೆ ಬಂದಿದ್ದಾರೆ. ಪುತ್ರಿಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ನಾಗರಾಜಪ್ಪ, ಜೀವನ ಅಂತ್ಯಗೊಳಿಸಿಕೊಂಡಿದ್ದು ಕುಟುಂಬವನ್ನು ದುಃಖದ ಮಡುವಿಗೆ ತಳ್ಳಿದೆ.

ಮಗ, ಅಳಿಯ, ಅಕ್ಕನ ಮಕ್ಕಳೊಂದಿಗೆ ಸೇರಿ ಎಲ್ಲೆಡೆ ಹುಡಕಾಟ ನಡೆಸಿದೆವು. ಪೊಲೀಸರ ಬಳಿಯೂ ವಿಚಾರಿಸಿದೆವು. ಒಂದು ದಿನ ಕಳೆದರೂ ಪತಿ ಮನೆಗೆ ಮರಳಲಿಲ್ಲ. ಆತಂಕಗೊಂಡು ಜುಲೈ 2ರಂದು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದೆವು. ಭಾನುವಾರ ಬೆಳಗ್ಗೆ 8ಕ್ಕೆ ದೂರವಾಣಿ ಕರೆ ಮಾಡಿದ ಪೊಲೀಸರು ತುಮಕೂರಿನಲ್ಲಿ ಮೃತಪಟ್ಟಿರುವ ಮಾಹಿತಿ ನೀಡಿದರು ಎಂದು ಕಣ್ಣೀರು ಸುರಿಸಿದರು.

ಎಸ್‌ಐ ಅಂತ್ಯಕ್ರಿಯೆ:

ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಬಡಾವಣೆಯ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (59) ಅವರ ಮೃತದೇಹವನ್ನು ಭಾನುವಾರ ಸಂಜೆ ದಾವಣಗೆರೆಗೆ ತರಲಾಯಿತು. ಮನೆಯ ಮುಂದೆ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಕುಟುಂಬದ ಆಕ್ರಂದನ ಮನಕಲಕುವಂತಿತ್ತು. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ