ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ಮುದ್ದೇಬಿಹಾಳ : ಪಂಪಸೆಟ್ ಹೊಂದಿರುವ ರೈತರು 2018ರಲ್ಲಿ 50 ರೂ.ತುಂಬಿಸಿಕೊoಡು ಆರ್.ಆರ್ ನಂಬರ್ ಸಹಿತ ವಿದ್ಯುತ್‌ನ್ನು ಪಂಪಸೆಟ್‌ಗಳಿಗೆ ಒದಗಿಸಲಾಗಿತ್ತು.ಈಗ ಏಕಾಏಕಿ ಡೆಪಾಸಿಟ್ ಹಣ ತುಂಬದಿದ್ದರೆ ಪಂಪಸೆಟ್‌ಗಳಿಗೆ ವಿದ್ಯುತ್ ಕಡಿತಗೊಳಿಸುವ ಕಾರ್ಯತಂತ್ರ ಹೆಸ್ಕಾಂನಿoದ ನಡೆದಿದ್ದು ಇದು ಮುಂದುವರೆದರೆ ರೈತ ಸಂಘಟನೆಗಳಿoದ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.

ಪಟ್ಟಣದ ಹೆಸ್ಕಾಂ ಕಚೇರಿಗೆ ಆಗಮಿಸಿದ್ದ ಹಂಡರಗಲ್,ಯರಝರಿ,ಹಿರೇಮುರಾಳ ಮೊದಲಾದ ಗ್ರಾಮಗಳ ರೈತರು ಹೆಸ್ಕಾಂ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಪಂಪಸೆಟ್‌ಗೆ 18,000 ರೂ. ಡಿಪಾಸೆಟ್ ತುಂಬಲು ಹಾಗೂ ಆರ್.ಆರ್.ನಂಬರ್ ಇಲ್ಲದವರಿಗೆ ಪ್ರತಿ ಪಂಪಸೆಟ್‌ಗೆ 36,000 ರೂ.ಡಿಪಾಸಿಟ್ ತುಂಬಲು ರೈತರಿಗೆ ಆದೇಶ ಮಾಡಿದ್ದಾರೆ.ಅಲ್ಲದೇ ಅವಧಿ ಎರಡು ದಿನಗಳ ಕಾಲಾವಕಾಶ ನೀಡಿದ್ದಾರೆ.ಒಂದು ಕಡೆ ಜನರು ಕೇಳದೇ ಇದ್ದರೂ ವಿದ್ಯುತ್ ಉಚಿತವಾಗಿ ಕೊಡುತ್ತಿರುವ ಸರ್ಕಾರ ಇನ್ನೊಂದೆಡೆ ರೈತರು ಬೆಳೆಯುತ್ತಿರುವ ಬೆಳೆಗಳಿಗೆ ವಿದ್ಯುತ್ ಸ್ಥಗಿತಗೊಳಿಸುವ ಕಾರ್ಯಕ್ಕೆ ಮುಂದಾಗುತ್ತಿದೆ ಎಂದು ರೈತ ಮುಖಂಡ ಸಂಗಣ್ಣ ಬಾಗೇವಾಡಿ ಹೇಳಿದರು.

2018ರಲ್ಲಿ 50 ರೂ.ಗಳಲ್ಲಿ ಆರ್.ಆರ್ ನಂಬರ್ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿತ್ತು.ಆದರೆ ಈಗ ಆದೇಶ ಮಾರ್ಪಡಿಸಿ ಡಿಪಾಸಿಟ್ ಹಣವನ್ನು ತುಂಬುವoತೆ ಅಧಿಕಾರಿಗಳ ಮೂಲಕ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದರು.
ಈಗ ಹೊಲದಲ್ಲಿ ಬೆಳೆಗಳ ಕಟಾವಿನ ಸಮಯವಾಗಿದ್ದು ವಿದ್ಯುತ್ ಕಡಿತಗೊಳಿಸಿದರೆ ರೈತರಿಗೆ ತೊಂದರೆಯಾಗುತ್ತದೆ.ಮೊದಲಿನ 2018ರಲ್ಲಿ ಮಾಡಿರುವ ಆದೇಶವನ್ನೆ ಮುಂದುವರೆಸಬೇಕು.ಇಲ್ಲದಿದ್ದರೆ ರೈತರು ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಸದ್ಯಕ್ಕೆ ಯಾವುದೇ ರೈತರ ಟಿಸಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶ ಮಾಡಿಲ್ಲ.ಒಂದು ವಾರ ಕಾಲಾವಕಾಶ ಇದ್ದು ಪಂಪಸೆಟ್ ಸಾಮರ್ಥ್ಯದ ಆಧಾರದ ಮೇಲೆ ಡೆಪಾಸಿಟ್ ಕಟ್ಟಬೇಕಿರುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಮನವಿ ಸಲ್ಲಿಸುವ ಸಮಯದಲ್ಲಿ ರೈತ ಮುಖಂಡರಾದ ವಾಯ್.ಎಲ್.ಬಿರಾದಾರ, ಸಂಗಪ್ಪ ಹಂಡರಗಲ್, ಅಯ್ಯಪ್ಪ ಬಿದರಕುಂದಿ, ಬಸನಗೌಡ ಪಾಟೀಲ ಮೊದಲಾದವರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,