Rain effect Water on road in Hungunda market

Rain update: ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರ ದುರ್ಮರಣ

Rain update: ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರ ದುರ್ಮರಣ

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಲ್ಲಿ ಸೋಮವಾರ ಸುರಿದ ದಿಢೀರ್ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಯಾದಗಿರಿಯಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಯಾದಗಿರಿ, ಕಲಬುರಗಿ, ಚಿಕ್ಕಮಗಳೂರಿನ ಶೃಂಗೇರಿ, ಧಾರವಾಡ, ಕೊಪ್ಪಳ, ಗದಗ ಮತ್ತಿತರ ಜಿಲ್ಲೆಗಳಲ್ಲಿ ಸಂಜೆ ಸಿಡಿಲಬ್ಬರದ ಜತೆಗೆ ಭಾರೀ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರೀ ಮಳೆಯಿಂದಾಗಿ ಧಾರವಾಡದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಸಮಸ್ಯೆ ಯಾದರೆ, ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸಿಡಿಲಬ್ಬರಕ್ಕೆ ಎರಡು ಜಾನುವಾರು ಹಾಗೂ ಗದಗ ಜಿಲ್ಲೆಯ ಡಂಬಳ ಹೋಬಳಿಯಲ್ಲಿ ಮೃತರಲ್ಲಿ ಮೂವರು ಒಂದೇ ಕುಟುಂಬದವರು ಎಂದು ವರದಿಯಾಗಿದೆ.

ನಾಲ್ಕು ಕುರಿಗಳು ಮೃತಪಟ್ಟಿವೆ. ಕಲಬುರಗಿಯಲ್ಲೂ ಸತತ 2 ಗಂಟೆ ಭರ್ಜರಿ ಮಳೆಯಾ ಗಿದ್ದು, ಜನ ಪರದಾಡಬೇಕಾಯಿತು.

ಇನ್ನು ಯಾದಗಿರಿ ನಗರ ಸುತ್ತಮುತ್ತ ಸುಮಾರು ಅರ್ಧ ಗಂಟೆ ಕಾಲ ಭಾರೀ ಮಳೆಯಾಗಿದ್ದು, ಜೀನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ಚೇನು (22), ಕಿಶನ್ (30), ಸುಮಿ ಬಾಯಿ (30) ಹಾಗೂ ನೇನು (18) ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯ ಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ಹೊಲದಲ್ಲಿದ್ದ ದೇವಸ್ಥಾನದೊ ಳಗೆ ತೆರಳಿದಾಗ ಸಿಡಿಲು ಬಡಿದಿದೆ.

ಇದನ್ನೂ ಓದಿ: Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ