ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು.

ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿ ಸ್ಥಾಪಿಸಿ, ಇಲ್ಲಿನ ಮಕ್ಕಳಿಗೆ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ತರಬೇತಿ ನೀಡುವ ಮೂಲಕ ತಾಲೂಕಿನ ಹೆಸರನ್ನು ರಾಜ್ಯಾದ್ಯಂತ ಪಸರಿಸುವಂತೆ ಮಾಡುತ್ತಿರುವ ಸಂಸ್ಥಾಪಕ ಶಿವಕುಮಾರ್ ಶಾರದಳ್ಳಿ ಅವರ ಪ್ರಯತ್ನ ಶ್ಲಾಘನೀಯವಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿದರೆ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಕುಂಟೋಜಿ ಹಿರೇಮಠದ ಡಾ. ಚನ್ನವೀರ ಶಿವಾಚಾರ್ಯ ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಪ್ರಾಮಾಣಿಕ ಪರಿಶ್ರಮ ಇದ್ದರೆ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸು ಸಾಧಿಸಲು ಸಾಧ್ಯ. ಕರಾಟೆ ಹಾಗೂ ರೋಲರ್ ಸ್ಕೆಟಿಂಗ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಪರಿಶ್ರಮಪಟ್ಟಿರುವುದರಿಂದಲೇ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ಸಾಹಿತಿ ಅಶೋಕ ಹಂಚಲಿ ಮಾತನಾಡಿ, ಒಲಿಂಪಿಕ್ಸ್ ಹಾಗೂ ಏಷ್ಯನ್ ಕ್ರೀಡಾಕೂಟಗಳಂತಹ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಕರಾಟೆ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಮುದ್ದೇಬಿಹಾಳದ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ತಾಲೂಕಿನ ಕೀರ್ತಿಯನ್ನು ಜಗತ್ತಿನಾದ್ಯಂತ ಪಸರಿಸಲಿ ಎಂದು ಆಶಿಸಿದರು. ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಅರವಿಂದ ಕೊಪ್ಪ,ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ,ಪುರಸಭೆ ಮಾಜಿ ಸದಸ್ಯೆ ಸಹನಾ ಬಡಿಗೇರ ಮಾತನಾಡಿದರು.ಬಿಎಎಸ್ ಶಾಲೆ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ,ಅಕ್ಷತಾ ಚಲವಾದಿ ಸೇರಿದಂತೆ ಸಮಾರಂಭದಲ್ಲಿ ಕರಾಟೆ ಹಾಗೂ ರೋಲರ್ ಸ್ಕೆಟಿಂಗ್‌ನಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳು, ಪಾಲಕರು, ಕ್ರೀಡಾಭಿಮಾನಿಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಪದಗ್ರಹಣ :
ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಮೊಹಮ್ಮದ್ ನದೀಮ್, ಪ್ರಧಾನ ಕಾರ್ಯದರ್ಶಿಯಾಗಿ ಕಟ್ಟೆ ಸ್ವಾಮಿ, ಗೌರವಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಆಚಾರ್ಯ, ಉಪಾಧ್ಯಕ್ಷರಾಗಿ ಸತೀಶ, ಮೌನೇಶ ಹಾಗೂ ವಿಶಾಲ, ಖಜಾಂಚಿಯಾಗಿ ಶಿವಕುಮಾರ್ ಶಾರದಳ್ಳಿ, ಸಹ ಕಾರ್ಯದರ್ಶಿಯಾಗಿ ಪ್ರಕಾಶ ಉಜನಿಕೊಪ್ಪ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಸುಭಾಷ್ ವಿಜಯನಗರ ಅವರು ಅಧಿಕಾರ ವಹಿಸಿಕೊಂಡು ಪ್ರಮಾಣವಚನ ಸ್ವೀಕರಿಸಿದರು.

Latest News

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ : ಪ್ರಸಕ್ತ ವರ್ಷ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಭೀಕರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿದ್ದು ಶಾಸಕ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ:                       ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ

16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ ತಾಲ್ಲೂಕು ಇನ್ನೂವರೆಗೂ ಘೋಷಣೆಯಾಗಿಲ್ಲ.ಎರಡು ದಿನಗಳ ಕಾಲ ಮಣ್ಣಿನ ತೇವಾಂಶ,ಬೆಳೆಯ ಗುಣಮಟ್ಟ,ವಾತಾವರಣದಲ್ಲಿ ತೇವಾಂಶ ಎಷ್ಟಿದೆ ಎಂದು ಸರ್ವೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕು.ಈಗ ಸಾಧಾರಣ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದಾರೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ದಿನವೂ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಸರ್ಕಾರಕ್ಕೆ,ಸಿಎಂ,ಕoದಾಯ ಮಂತ್ರಿ ಹಾಗೂ ಶಾಸಕ ಸಿ.ಎಸ್.ನಾಡಗೌಡರಿಗೆ ಜಯಘೋಷಗಳನ್ನು ಹಾಕಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ