ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ.

ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ ಪ್ರಮಾಣ ಪತ್ರಗಳನ್ನು ವಿತರಿಸಬೇಕು.ಆದರೆ ಇಲ್ಲಿ ಫಲಿತಾಂಶ ಘೋಷಣೆಯಾಗಿ ವಾರ ಕಳೆದರೂ ಪ್ರಮಾಣ ಪತ್ರ ಕೊಡುವ ಕೆಲಸ ಆಗಿಲ್ಲ.ಅಲ್ಲದೇ ಪ್ರಮಾಣ ಪತ್ರಗಳನ್ನು ನ್ಯಾಯಾಲಯದ ಪ್ರಕರಣಕ್ಕೆ ಒಳಪಟ್ಟಂತೆ ನೀಡಲಾಗಿದೆ ಎಂಬ ಸೂಚನೆಯನ್ನು ಹಾಕಿ ವಿತರಿಸಬಹುದಿತ್ತು.ಆದರೆ ಅಧಿಕಾರಿಗಳು ತಮಗೆ ಈ ವಿಷಯವೇ ತಿಳಿದಿಲ್ಲ ಎಂಬAತೆ ನಡೆದುಕೊಳ್ಳುತ್ತಿರುವುದು ಅಂಜುಮನ್ ಸಂಸ್ಥೆಯ ಚುನಾವಣಾ ಪ್ರಕ್ರಿಯೆಯ ಮೇಲೆ ಹಲವು ಅನುಮಾನಗಳನ್ನು ಸೃಷ್ಟಿಯಾಗುವಂತೆ ಮಾಡುತ್ತವೆ.

ಅಚ್ಚರಿಯ ಸಂಗತಿ ಎಂದರೆ ಆಯ್ಕೆಯಾದ ಸದಸ್ಯರಿಗೆ ಅಧಿಕೃತವಾಗಿ ಪ್ರಮಾಣ ಪತ್ರ ವಿತರಿಸದೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.ಆ.೩೧ ರಂದು ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿ ಮಾಡಿದ್ದು ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಯಾರ ಅಣತಿಯಂತೆ ಕೆಲಸ ಮಾಡುತ್ತಿದ್ದರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಆಯ್ಕೆಯಗೊಂಡಿರುವ ಸದಸ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲ ನಡೆದಿದ್ದರೂ ಸರ್ಕಾರದ ಪ್ರತಿನಿಧಿಯಾಗಿರುವ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಅಂಜುಮನ್ ಕಮೀಟಿಗೆ ನಿಯೋಜಿತ ಕೇರ್ ಟೇಕರ್ ನಡೆಯ ಬಗ್ಗೆ ಆಗಲೀ, ಚುನಾವಣಾಧಿಕಾರಿ ಪ್ರಮಾಣ ಪತ್ರಗಳನ್ನು ಕೊಡದೇ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸುತ್ತಿರುವುದನ್ನಾಗಲೀ ಪ್ರಶ್ನಿಸುತ್ತಿಲ್ಲ ಎಂದರೆ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿರುವ ಸಂಸ್ಥೆಯ ಚುಕ್ಕಾಣಿ ಚುನಾವಣಾಧಿಕಾರಿ ಬಯಸಿದವರ ಕೈ ಕೊಡಲು ಹೊರಟಿದ್ದಾರೆಯೇ ಎಂಬ ಗುಮಾನಿ ಅಂಜುಮನ್ ಕಮೀಟಿ ಸದಸ್ಯರಲ್ಲಿ ಮೂಡಿದೆ.ಇದಕ್ಕೆ ಉತ್ತರಿಸುವವರು ಯಾರು ?

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ