ವಣಕಿಹಾಳ ಗ್ರಾಮದಲ್ಲಿ ಘಟನೆ : ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ವಣಕಿಹಾಳ ಗ್ರಾಮದಲ್ಲಿ ಘಟನೆ : ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ಮುದ್ದೇಬಿಹಾಳ : ವಿದ್ಯುತ್ ಶಾಟ್ ಸರ್ಕಿಟ್‌ನಿಂದಾಗಿ ಹನ್ನೆರಡು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ತಾಲ್ಲೂಕಿನ ವಣಕಿಹಾಳ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ವಣಕಿಹಾಳ ಗ್ರಾಮದ ಶಾಂತಗೌಡ ಬಿರಾದಾರಗೆ ಸೇರಿದ 3.32 ಎಕರೆ,ಗೀತಾ ಬಿರಾದಾರಗೆ ಸೇರಿದ 2.02 ಎಕರೆ , ಶಿವನಗೌಡ ಬಿರಾದಾರಗೆ ಸೇರಿದ 4 ಎಕರೆ,ನಾಗಪ್ಪ ಹುಮನಾಬಾದ ಅವರಿಗೆ ಸೇರಿದ 5.10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ.

ಕಬ್ಬಿನ ಬೆಳೆಗೆ ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ರೈತರು ಮುದ್ದೇಬಿಹಾಳ ಹಾಗೂ ತಾಳಿಕೋಟಿ ಅಗ್ನಿಶಾಮಕ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಇಲಾಖೆಯ ಎರಡೂ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು.ಅಂದಾಜು 30 ಲಕ್ಷ ರೂ.,ಗಳಿಗಿಂತಲೂ ಹೆಚ್ಚು ನಷ್ಟ ರೈತರಿಗೆ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಕಬ್ಬಿಗೆ ಬೆಂಕಿ ತಗುಲಿದ ಸುದ್ದಿ ತಿಳಿದ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಬೆಂಕಿ ನಂದಿಸಲು ಶ್ರಮದಾನ ಮಾಡಿದರು.ಅಗ್ನಿಶಾಮಕ ಠಾಣಾಧಿಕಾರಿ ತಿಪ್ಪಣ್ಣ ನಾವದಗಿ,ಸಿಬ್ಬಂದಿ ಜಾಕೀರಹುಸೇನ್ ನಾಲತವಾಡ,ಶಿವಾನಂದ ಭೋವಿ,ಲಕ್ಷ್ಮಣ ಕರ್ನಾಲಗಿ,ಶ್ರೀಶೈಲಗೌಡ ಪಾಟೀಲ,ಕಾರ್ತಿಕ ಅಜಮನಿ,ಮಹಾಂತಪ್ಪ ಬಿರಾದಾರ ,ವೀರೇಶ್ ಹಂಡರಗಲ್,ಶ್ರೀನಿವಾಸ ಚವ್ಹಾಣ,ದೇವೇಂದ್ರ ರಾಥೋಡ ಮತ್ತಿತರರು ಶ್ರಮಿಸಿದರು.

Latest News

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು

ಗಾಂಧೀಜಿಯವರ ಸಂದೇಶಗಳು ಗಾಳಿಪಾಲು-ಆರ್.ಜಿ.ಹಳ್ಳಿ ನಾಗರಾಜ

ಗಾಂಧೀಜಿಯವರ ಸಂದೇಶಗಳು ಗಾಳಿಪಾಲು-ಆರ್.ಜಿ.ಹಳ್ಳಿ ನಾಗರಾಜ

ಮುದ್ದೇಬಿಹಾಳ : ಒಂದೆಡೆ ಮಸೀದಿ,ಇನ್ನೊಂದೆಡೆ ದೇವಸ್ಥಾನ.ಇಂತಹ ಭಾವೈಕ್ಯತೆಯ ನೆಲದಲ್ಲಿ ತಂದೆ-ತಾಯಿಯ ಸ್ಮರಣೆಯೊಂದಿಗೆ ಗಾಂಧೀಜಿ-ಶಾಸ್ತಿçಜಿ ಜಯಂತಿ

ಪ್ರಧಾನಿ ಮೋದಿ ಹೆಸರು ಕೆಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ಇಂಚಗೇರಿ ಮಠದ ಶಶಿಕಾಂತ ಗುರೂಜಿ ವಾಗ್ದಾಳಿ

ಪ್ರಧಾನಿ ಮೋದಿ ಹೆಸರು ಕೆಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ಇಂಚಗೇರಿ ಮಠದ ಶಶಿಕಾಂತ ಗುರೂಜಿ ವಾಗ್ದಾಳಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು

ಬಿಜೆಪಿ ಕಾರ್ಯಕರ್ತರಿಂದ ಕೂಲಿ ಪ್ರಹಾರ :                             ಸರ್ಕಾರದ ಪ್ರತಿಕೃತಿಗೆ ಚಿಲ್ಲರೆ ನೋಟಿನ ಹಾರ ಹಾಕಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತರಿಂದ ಕೂಲಿ ಪ್ರಹಾರ : ಸರ್ಕಾರದ ಪ್ರತಿಕೃತಿಗೆ ಚಿಲ್ಲರೆ ನೋಟಿನ ಹಾರ ಹಾಕಿ ಪ್ರತಿಭಟನೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಬರ ಪರಿಹಾರದ ಹಣವಾಗಿ 2500 ರೂ.ನೀಡಲು ಮುಂದಾಗಿರುವ ಕ್ರಮವನ್ನು

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಔಷಧ ತಜ್ಞರ ಪಾತ್ರ ಮಹತ್ವದ್ದಾಗಿದೆ ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಂಗನಾಥ್ ವೈದ್ಯ ಹೇಳಿದರು. ವಿಶ್ವ ಔಷಧ ತಜ್ಞರ ದಿನಾಚರಣೆ ಅಂಗವಾಗಿ ಮುದ್ದೇಬಿಹಾಳ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ಶುಕ್ರವಾರ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್ ವಿತರಿಸಿ ಅವರು ಮಾತನಾಡಿದರು. ವೈದ್ಯರು ರೋಗಿಗಳಿಗೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುದ್ದೇಬಿಹಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವು ಮಡಿಕೇಶ್ವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೇಗೆ ಜರುಗಿದ್ದು ಈ ಕ್ರೀಡಾಕೂಟದಲ್ಲಿ ಬಿದರಕುಂದಿ ಶಾಲೆಯ 14 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಥ್ರೋಬಾಲ್ ಆಟದಲ್ಲಿ ತಾಲೂಕ ಮಟ್ಟದಲ್ಲಿ ಗೆದ್ದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯಗುರು ಅನಿಲ್‌ಕುಮಾರ್