ಸಸಿ ನೆಟ್ಟು ವನಮಹೋತ್ಸವ ಆಚರಣೆ

ಸಸಿ ನೆಟ್ಟು ವನಮಹೋತ್ಸವ ಆಚರಣೆ

ಇಳಕಲ್: ನಗರದ ಜೋಶಿ ಗಲ್ಲಿಯ ರಾಷ್ಟ್ರೀಯ ಹೆದ್ದಾರಿ ಐವತ್ತಕ್ಕೆ ಹೊಂದಿಕೊಂಡಂತೆ ಇರುವ ಸಾರ್ವಜನಿಕ ಉದ್ಯಾನವನದಲ್ಲಿ ಇಳಕಲ್ ಲೈನ್ಸ್ ಕ್ಲಬ್ ನ ಸದಸ್ಯರು ಸಸಿ ನೆಡುವ ಮೂಲಕ ವನಮಹೋತ್ಸವದಲ್ಲಿ ಪಾಲ್ಗೊಂಡರು.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಈ ಉದ್ಯಾನವನ ನಗರಕ್ಕೆ ಆಗಮಿಸುವ ಜನರನ್ನು ಆಕರ್ಷಿಸುವಂತೆ ಮಾಡುವ ನಿಟ್ಟಿನಲ್ಲಿ ಈ ಉದ್ಯಾನವನವನ್ನು ಸುಂದರವಾಗಿ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಲೈನ್ಸ್ ಕ್ಲಬ್ ಅಧ್ಯಕ್ಷ ಮಹಾಬಲೇಶ್ ಮಠದ ಅವರು ತಿಳಿಸಿದರು.

ಲೈನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ರಾಜು ಕಾಟವಾ ಮಾತನಾಡಿ, ಉದ್ಯಾನವನದ ಸುತ್ತಮುತ್ತಲಿ ವಾಸವಿರುವ ನಿವಾಸಿಗಳು ತಮ್ಮ ಮಕ್ಕಳನ್ನು ಪಾಲನೆ ಪೋಷಣೆ ಮಾಡುವಂತೆ ಈ ಸಸಿಗಳನ್ನು ಬೆಳೆಸುವಲ್ಲಿ ಕಾಳಜಿ ವಹಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ಕರೆ ನೀಡಿದರು.

ಈ ವನಮಹೋತ್ಸವ ಕಾರ್ಯಕ್ರಮದಲ್ಲಿ ಜೋಶಿಗಲ್ಲಿ ಬಡಾವಣೆಯ ನಗರಸಭೆ ಸದಸ್ಯ ಮೌನೇಶ್ ಬಂಡಿವಡ್ಡರ್ ಪಾಲ್ಗೊಂಡಿದ್ದರು ಈ ವೇಳೆ ಹಾಗೂ ಬಡಾವಣೆಯ ನಿವಾಸಿಗಳ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲೈನ್ಸ್ ಕ್ಲಬ್ ಅಧ್ಯಕ್ಷ ಮಹಾಬಲೇಶ್ ಮಾರಟದ, ಕಾರ್ಯದರ್ಶಿ ಮಹಾಂತೇಶ್ ಅಕ್ಕಿ, ಖಜಾಂಚಿ ಮುರುಗೇಶ್ ಪಾಟೀಲ್, ರಾಜಕುಮಾರ ಕಾಟವಾ, ಸಂತೋಷ್ ಪೂಜರಿ, ಡಾ. ವಿಠ್ಠಲ್ ಶಾವಿ, ಡಾ. ನಾಗರಾಜ ಸಜ್ಜನ್, ಪ್ರಮೋದ್ ಹಂಚಾಟೆ, ರವಿ ಅಂಗಡಿ, ವಿಶಾಲ್ ಜೈನ, ಲಾಲಬಾಷಾ ಶಿವನಗುತ್ತಿ, ಅಪ್ಪು ಹಿರೇಮಠ, ಬಸವರಾಜ ಮಠದ, ಡಾ. ಟಿಪ್ಪು ಭಂಡಾರಿ ಸೇರಿದಂತೆ ಬಡಾವಣೆ ನಿವಾಸಿಗಳಾದ ಆರ್.ಕೆ. ಕುಲಕರ್ಣಿ ಹಾಗೂ ಲೈನ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ