Ettinahole Yojane: Inauguration of Ettinahole Yojane

Ettinahole yojane: ಎತ್ತಿನಹೊಳೆ ಯೋಜನೆ ಲೋಕಾರ್ಪಣೆ.. ಸಿಎಂಗೆ ಡಿಸಿಎಂ ಸೇರಿ ಏಳು ಸಚಿವರ ಸಾಥ್..

Ettinahole yojane: ಎತ್ತಿನಹೊಳೆ ಯೋಜನೆ ಲೋಕಾರ್ಪಣೆ.. ಸಿಎಂಗೆ ಡಿಸಿಎಂ ಸೇರಿ ಏಳು ಸಚಿವರ ಸಾಥ್..

ಹಾಸನ: ದಶಕಗಳ ಕನಸಗಿರುವ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಯಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್‌ಗಳನ್ನು ಆನ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸಿದ್ದರಾಮಯ್ಯ‌ ಗೆ ಡಿಸಿಎಂ ಡಿಕೆ ಶಿವಕುಮಾ‌ರ್ ಹಾಗೂ ಸಚಿವ ರಾಜಣ್ಣ ಅವರು ಸಾಥ್ ನೀಡಿದರು. ಈ ವೇಳೆ ಏಳು ಸಚಿವರು ಈ ಕಾರ್ಯಕ್ಕೆ ಕೈ ಜೋಡಿಸಿದ್ದು, ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್‌ಗಳಿಗೂ ಚಾಲನೆ ನೀಡಲಾಯಿತು.

ಚಾಲನೆ ನಂತರ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಳ್ಳಿ ಬಳಿ ಬಾಗಿನ ಅರ್ಪಣೆ ಮಾಡಿ ಬಳಿಕ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.

ಇದನ್ನೂ ಓದಿ : CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

ಈ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದಲ್ಲಿರುವ ವಿತರಣಾ ತೊಟ್ಟಿಯ ಕಾರ್ಯ ನಿರ್ವಹಣಾ ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ