ಹಾಸನ: ದಶಕಗಳ ಕನಸಗಿರುವ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಯಾಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್‌ಗಳನ್ನು ಆನ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಸಿದ್ದರಾಮಯ್ಯ ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ರಾಜಣ್ಣ ಅವರು ಸಾಥ್ ನೀಡಿದರು. ಈ ವೇಳೆ ಏಳು ಸಚಿವರು ಈ ಕಾರ್ಯಕ್ಕೆ ಕೈ ಜೋಡಿಸಿದ್ದು, ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್‌ಗಳಿಗೂ ಚಾಲನೆ ನೀಡಲಾಯಿತು.
ಚಾಲನೆ ನಂತರ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಳ್ಳಿ ಬಳಿ ಬಾಗಿನ ಅರ್ಪಣೆ ಮಾಡಿ ಬಳಿಕ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.
ಇದನ್ನೂ ಓದಿ : CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)
ಈ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದಲ್ಲಿರುವ ವಿತರಣಾ ತೊಟ್ಟಿಯ ಕಾರ್ಯ ನಿರ್ವಹಣಾ ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.