ವಿಜಯಪುರ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಒಂಭತ್ತು ಅಂಕಗಳು ಹೆಚ್ಚುವರಿಯಾಗಿ ಲಭಿಸಿದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವ ಸಾಧನೆ ತೋರಿದ್ದಾಳೆ.
ತಾಳಿಕೋಟೆ ತಾಲ್ಲೂಕು ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಎಸ್. ಪಾಟೀಲ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯಕ್ಕೆ ಹೆಚ್ಚುವರಿಯಾಗಿ ಒಂಭತತು ಅಂಕಗಳು ಪಡೆಯುವುದರೊಂದಿಗೆ 625 ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡು ತಾಲ್ಲೂಕಿನ,ಜಿಲ್ಲೆಯ ಹಾಗೂ ಕಲಿತ ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ.
ವಿದ್ಯಾರ್ಥಿನಿ ಸಾಧನೆಗೆ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾನಾಡಗೌಡ ನಡುವಿನಮನಿ ಹಾಗೂ ಆಡಳಿತಮಂಡಳಿ ನಿರ್ದೇಶಕರು, ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.