ಮುದ್ದೇಬಿಹಾಳ : ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ವಿಜಯಪುರ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಇವರ ಸಹಯೋಗದೊಂದಿಗೆ
ಆ.12 ರಂದು ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯಲ್ಲಿ ನೇತ್ರ ಉಚಿತ ತಪಾಸಣೆ (eye test camp) ಹಾಗೂ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ (ಐ.ಓ.ಎಲ್. ಮಸೂರ ಅಳವಡಿಕೆ) ನಡೆಯಲಿದೆ.
ಇದನ್ನೂ ಓದಿ: ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..
ಶಸ್ರ್ತ ಚಿಕಿತ್ಸೆಗೆ ಆಯ್ಕೆಯಾದ ಅರ್ಹ ರೋಗಿಗಳನ್ನು ಶಸ್ತ್ರಚಿಕಿತ್ಸೆಗಾಗಿ ಅದೇ ದಿವಸ ವಿಜಯಪುರದ ಬಿ.ಎಲ್.ಡಿ.ಇ. ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.