ಯಲಗೂರ ಕ್ರಾಸ್‌ನ ಹೋರಾಟಕ್ಕೆ ಡಿಸಿ,ಎಸ್ಪಿ ಭೇಟಿ: ದರ ಘೋಷಿಸಿದ ನಂತರವೇ ಕಾರ್ಖಾನೆ ಆರಂಭ-ಡಿಸಿ ಡಾ.ಆನಂದ್

ಯಲಗೂರ ಕ್ರಾಸ್‌ನ ಹೋರಾಟಕ್ಕೆ ಡಿಸಿ,ಎಸ್ಪಿ ಭೇಟಿ: ದರ ಘೋಷಿಸಿದ ನಂತರವೇ ಕಾರ್ಖಾನೆ ಆರಂಭ-ಡಿಸಿ ಡಾ.ಆನಂದ್

ವಿಜಯಪುರ : ಯಾವುದೇ ಕಾರ್ಖಾನೆ ದರ ನಿಗದಿಪಡಿಸದೇ ಚಾಲನೆ ಮಾಡಬಾರದು ಎಂದು ಕಬ್ಬು ಬೆಳಗಾರರ ಬೇಡಿಕೆಯಂತೆ ದರ ಘೋಷಣೆ ಮಾಡಿದ ನಂತರವೇ ಕಾರ್ಖಾನೆ ಆರಂಭಿಸಲು ಸೂಚನೆ ನೀಡಿದ್ದೇವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ತಿಳಿಸಿದ್ದಾರೆ.

ಕಬ್ಬಿಗೆ ದರ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಯಲಗೂರ್ ಕ್ರಾಸ್ ಬಳಿ ಎನ್.ಎಚ್-50ನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಾತನಾಡಿ ಈ ವಿಷಯ ತಿಳಿಸಿದರು.

ಕಬ್ಬು ಬೆಳಗಾರರೊಂದಿಗೆ ಜಿಲ್ಲೆಯಲ್ಲಿ ಸುದೀರ್ಘ ಸಭೆ ನಡೆಸಲಾಗಿದೆ.ಜಿಲ್ಲಾ ಹಂತದಲ್ಲಿ ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರತಿ ಕಾರ್ಖಾನೆವಾರು ಪ್ರತ್ಯೇಕ ಸಮೀತಿ ಮಾಡಲಾಗಿದೆ.ತೂಕದ ವ್ಯತ್ಯಾಸ ಗಮನಿಸಲು ತಲಾ ಮೂರು ಜನರನ್ನು ಸಮೀತಿಯನ್ನು ರಚನೆ ಮಾಡಲಾಗಿದೆ.ಇಳುವರಿ ಮೋಸ ಆಗಬಾರದು ಎಂದು ಸಮೀತಿ ರಚಿಸಲಾಗಿದೆ ಎಂದು ತಿಳಿಸಿದರು.

ಎಫ್.ಆರ್.ಪಿ,ಎಂ.ಎಸ್.ಪಿ,ಇಥೇನಾಲ್ ಖರೀದಿ ಕುರಿತು ಸರ್ಕಾರದ ಮಟ್ಟದಲ್ಲಿ ಆಗುವಂತದ್ದಾಗಿದೆ. ಪಾರದರ್ಶಕವಾಗಿ ರೈತರ ವಿಚಾರದಲ್ಲಿ ಕಾರ್ಖಾನೆ ನಡೆಸಬೇಕು ಎಂದು ತಿಳಿಸಲಾಗಿದೆ.ಜಿಲ್ಲೆಯಲ್ಲಿ ಯಲಗೂರ ಕ್ರಾಸ್ ಹಾಗೂ ಸಿಂದಗಿ-ಗಬಸಾವಳಗಿ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು ಎಲ್ಲರಿಗೂ ಸಮಸ್ಯೆ ಆಗುತ್ತಿದೆ.ಕೂಡಲೇ ರೈತರು ತಮ್ಮ ಧರಣಿ ಹೆದ್ದಾರಿಯಿಂದ ತೆರವುಗೊಳಿಸಬೇಕು ಎಂದು ಡಿಸಿ ಮನವಿ ಮಾಡಿದರು.ಇದಕ್ಕೆ ಸ್ಪಂದಿಸಿದ ರೈತರು ರಾಜ್ಯ ಸಂಘದ ಮುಂದಿನ ಸೂಚನೆಯಂತೆ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿ ಧರಣಿ ಅಂತ್ಯಗೊಳಿಸಿದ್ದಾರೆ.

ಎಸ್ಪಿ ಲಕ್ಷö್ಮಣ ನಿಂಬರಗಿ,ಸAಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ,ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಸಾವಿರಾರು ರೈತರು ಇದ್ದರು. ಅಹೋರಾತ್ರಿ ಧರಣಿ ನಡೆಸಲು ಮುಂದಾದ ರೈತರ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಜಿಲ್ಲಾಡಳಿತದ ಅಧಿಕಾರಿಗಳು ಧರಣಿ ಹೆದ್ದಾರಿಯಿಂದ ತೆರವುಗೊಳಿಸುವುದಕ್ಕೆ ಸೂಚಿಸಿದರು. ಇಡೀ ದಿನ ಹೆದ್ದಾರಿ ಬಂದ್ ಮಾಡಿದ್ದರಿಂದ ವಿಜಯಪುರದ ಕಸಬಾ ಟೋಲ್‌ವರೆಗೂ ವಾಹನಗಳು ನಿಂತುಕೊAಡಿದ್ದವು.ಇದರಿAದ ಲಕ್ಷಾಂತರ ಪ್ರಯಾಣಿಕರು,ಗೂಡ್ಸ್ ವಾಹನಗಳ ಚಾಲಕರು ತೊಂದರೆ ಅನುಭವಿಸಬೇಕಾಯಿತು.


Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ