
ಮುದ್ದೇಬಿಹಾಳ : ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಂದ ಪತಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗೆದ್ದಲಮರಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ಸಾವನ್ನಪ್ಪಿದವರನ್ನು ಮೇಘಾ ಸಿದ್ದಪ್ಪ ಹರನಾಳ(26) ಹಾಗೂ ಆಕೆಯ ಪತಿ ಸಿದ್ದಪ್ಪ ಮಲ್ಲಪ್ಪ ಹರನಾಳ(32) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ. ಘಟನೆ ಕುರಿತು ಪತ್ರಿಕ್ರಿಯೆ ನೀಡಿದ ಡಿವೈಎಸ್‌ಪಿ ನಂದಗಾವಿ, ದಂಪತಿ ಸಾವಿಗೆ ಪತಿ, ಪತ್ನಿ ಮಧ್ಯೆ ಆಗಾಗ್ಗೆ ಕಲಹಗಳಾಗುತ್ತಿತ್ತು. ಸೋಮವಾರ ಜಗಳ ವಿಕೋಪಕ್ಕೆ ಹೋಗಿ ಇಬ್ಬರು ಸಾವನ್ನಪ್ಪಿದ್ದಾರೆ. ದಂಪತಿಗೆ ನಾಲ್ವರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.