ದೊಡ್ಡಬಳ್ಳಾಪುರ; ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರೈತನೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ ಹುಲಿಕುಂಟೆ ಬಳಿ ಸಂಭವಿಸಿದೆ.
ಮೃತ ರೈತನನ್ನು ಹುಲಿಕುಂಟೆ ಕಾಲೋನಿ ನಿವಾಸಿ 60 ವರ್ಷದ ನಾರಾಯಣಪ್ಪ ಎಂದು ಗುರುತಿಸಲಾಗಿದೆ.
ಡೈರಿಗೆ ಹಾಲು ಹಾಕಿ ಮನೆಗೆ ಮರಳುತ್ತಿದ್ದ ವೇಳೆ ಬೊಲೇರೋ ಗೋಡ್ಸ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.