ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ತಾಲ್ಲೂಕು ಮೂಕಿಹಾಳ ಗ್ರಾಪಂ ಸಮೀಪದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸನ್ 2021-22 ಮುಂಗಾರು ಹಂಗಾಮು, 2022-23ರ ಹಿಂಗಾರು ಹಂಗಾಮು,2024-25ರಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆವಿಮೆ ಪರಿಹಾರ ಬಂದಿಲ್ಲವೆoದು ಅಧಿಕಾರಿಗಳೇ ಮಾಹಿತಿ ನೀಡುತ್ತಿದ್ದಾರೆ.ಬೆಳೆವಿಮೆಗೆ ಕಂತು ಪಾವತಿಸಿದ ರೈತರ ಜಮೀನುಗಳಿಗೆ ಹೋಗಬೇಕಾದ ಅಧಿಕಾರಿಗಳು ಎಲ್ಲೋ ಕೂತು ಬೆಳೆ ಸರ್ವೆ ಮಾಡುತ್ತಾರೆ.ಇದರಲ್ಲಿ ದೊಡ್ಡ ವ್ಯವಸ್ಥಿತ ಮೋಸ ಅಡಗಿದೆ.ಗ್ರಾಮ ಪಂಚಾಯಿತಿಯ ನಾಲ್ವರು ಸಿಬ್ಬಂದಿಯೇ ರೈತನೊಬ್ಬನ ಜಮೀನಿಗೆ ಹೋಗಿ ಬೆಳೆ ಸಮೀಕ್ಷೆ ಮಾಡಿದ್ದಾಗಿ ತೋರಿಸುತ್ತಾರೆ.ಒಟ್ಟಾರೆ ಈ ಭಾಗದಲ್ಲಿ ಬೆಳೆವಿಮೆಯನ್ನು ರೈತರಿಗೆ ತಲುಪಿಸದೇ ವಂಚಿಸಲಾಗಿದೆ.ಅಧಿಕಾರಿಗಳಿoದ ಸಮಗ್ರ ಮಾಹಿತಿ ತರಿಸಿಕೊಂಡು ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.

ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುಹಳ್ಳಿ ಕುಡಿವ ನೀರಿನ ಯೋಜನೆ ಅಡಿ ಶಿವಪೂರ,ನಾಗೂರ,ಹರನಾಳ,ಹಡಗಿನಾಳ ಗ್ರಾಮಗಳಿಗೆ ಇವತ್ತಿಗೂ ಕುಡಿಯುವುದಕ್ಕೆ ನೀರು ಪೂರೈಕೆ ಆಗುತ್ತಿಲ್ಲ ಎಂದು ಸ್ವತಃ ಮೂಕಿಹಾಳ ಗ್ರಾಪಂ ಪಿಡಿಒ ಎಸ್.ಆಯ್.ಗುಂಡಣ್ಣವರ ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರಾಜಕಾರಣಿಗಳು ರೈತರ ರಕ್ತ ಕುಡಿಯುವುದಕ್ಕೆ ಹುಟ್ಟಿದ್ದಾರೆಯೇ ಹೊರತು ಉದ್ಧಾರ ಮಾಡುವುದಕ್ಕಲ್ಲ.ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮದೊಂದೇ ಕ್ಷೇತ್ರಕ್ಕೆ ಸಿಮೀತವಾಗಿದ್ದಾರೆ.ಎಂಟು ಕ್ಷೇತ್ರದ ಶಾಸಕರು ರೈತರ ಸಮಸ್ಯೆ ಆಲಿಸುತ್ತಿಲ್ಲ.ನೀರಿಗಾಗಿ ಪ್ರತಿವರ್ಷ ಹೋರಾಟ ಮಾಡುವ ಪರಿಸ್ಥಿತಿ ಇದೆ.ಬಿಜೆಪಿ,ಕಾಂಗ್ರೆಸ್,ಜೆಡಿಎಸ್ ರೈತರನ್ನು ಮೂಲೆಗುಂಪು ಮಾಡುತ್ತಿವೆ.ಚಿಮ್ಮಲಗಿ ಏತ ನೀರಾವರಿ 20 ವರ್ಷವಾದರೂ ನೀರು ಹರಿಯುತ್ತಿಲ್ಲ.1500 ಕೋಟಿ ರೂ.ವೆಚ್ಚದ ಬೂದಿಹಾಳ ಪೀರಾಪೂರ ಯೋಜನೆ ಪೂರ್ಣಗೊಂಡಿಲ್ಲ.200 ಕೋಟಿ ರೂ.ಕೊಡಿಸಲು ಉಸ್ತುವಾರಿ ಸಚಿವರಿಂದ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬೆಳೆವಿಮೆಗೆ ಸಂಬoಧಿಸಿದoತೆ ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್ ರೈತರಿಗೆ ಮಾಹಿತಿ ನೀಡಿ, 2019 ರಿಂದ 2026ರವರೆಗೆ ಮೂರು ಬಾರಿ ರೈತರಿಗೆ ಬೆಳೆವಿಮೆ ಬಂದಿಲ್ಲ.ಇನ್ನುಳಿದ ಅವಧಿಗೆ ರೈತರಿಗೆ ವಿಮೆ ಪರಿಹಾರ ಹಣ ಜಮಾ ಆಗಿದೆ ಎಂದು ವಿವರಿಸಿದರು.ಒಂದು ಹಂತದಲ್ಲಿ ಕೃಷಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯನ್ನು ರೈತ ಸಂಘಟನೆ ಪದಾಧಿಕಾರಿಗಳು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.

ಪಂಚಾಯಿತಿ ವ್ಯಾಪ್ತಿಯಲ್ಲಿ ಹತ್ತು ಆರ್.ಓ ಪ್ಲಾಂಟಗಳಿದ್ದು ಅವುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.ಶಿವಪೂರ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟದಿಂದ ಹತ್ತು ಜನರು ಅಸುನೀಗಿದ್ದಾರೆ.ಅಬಕಾರಿ ಇಲಾಖೆಯ ಅಧಿಕಾರಿಗಳು ಎಲ್ಲೆಂದರಲ್ಲಿ ಅಕ್ರಮವಾಗಿ ಮಾರಾಟವಾಗುತ್ತಿರುವ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು.ಸರಕಾರಿ ಗೋಮಾಳ ಜಾಗೆಯ ಅತಿಕ್ರಮಣ ತೆರವುಗೊಳಿಸಬೇಕು.ಗ್ರಾಪಂ ವ್ಯಾಪ್ತಿಯಲ್ಲಿ ಮನೆಗಳ ಹಂಚಿಕೆ ಪಾರದರ್ಶಕವಾಗಿ ನಡೆಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟಗಾರರು ಆಗ್ರಹಿಸಿದರು.ಹೋರಾಟಗಾರರ ಪ್ರಶ್ನೆಗಳಿಗೆ ಆಯಾ ಇಲಾಖೆಯ ಅಧಿಕಾರಿಗಳು ಉತ್ತರ ನೀಡಿದರಲ್ಲದೇ ಎಲ್ಲ ಸಮಸ್ಯೆ ಪರಿಹಾರಕ್ಕೆ ಒಂದು ತಿಂಗಳ ಕಾಲಾವಕಾಶ ಕೋರಿದರು. ಹೋರಾಟದಲ್ಲಿ ಮೂಕಿಹಾಳ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ರೈತ ಪ್ರಮುಖರಾದ ಶ್ರೀಶೈಲ ವಾಲಿಕಾರ,ಮಲ್ಲಯ್ಯ ಹಿರೇಮಠ,ನಿಂಗಪ್ಪ ಕೆಂಭಾವಿ,ಸoಗಣ್ಣ ಬಿರಾದಾರ,ಪಟೇಲ್ ಮೂಕಿಹಾಳ, ಬಸವರಾಜ ಪಾಟೀಲ ಬಳವಾಟ,ನಾಗೇಶ , ಶಿವರಾಜ ಗುಗ್ಗಳ್ಳಿ ಮೊದಲಾದವರು ಪಾಲ್ಗೊಂಡಿದ್ದರು. ಮೂಕಿಹಾಳ ಕ್ರಾಸ್‌ದಿಂದ ಮೂಕಿಹಾಳ ದರ್ಗಾದವರೆಗೆ ಎತ್ತಿನ ಚಕ್ಕಡಿ ಹಾಗೂ ಪಾದಯಾತ್ರೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಅಧಿಕಾರಿಗಳ ಮನವಿಯ ಮೇರೆಗೆ ಪಂಚಾಯಿತಿಗೆ ಮುತ್ತಿಗೆ ಹಾಕುವುದನ್ನು ಕೊನೆಯ ಘಳಿಗೆಯಲ್ಲಿ ಹೋರಾಟಗಾರರು ಕೈ ಬಿಟ್ಟರು.

ಭಾರೀ ಪೊಲೀಸ್ ಭದ್ರತೆ:

ರೈತರ ಬೃಹತ್ ಹೋರಾಟಕ್ಕೆ ಬ.ಬಾಗೇವಾಡಿ ಉಪ ವಿಭಾಗದ ಪೊಲೀಸ್ ಠಾಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಯಿಸಲಾಗಿತ್ತು.ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ, ಸಿಪಿಐ ಮೊಹ್ಮದ ಫಸಿವುದ್ದೀನ, ಪಿಎಸ್‌ಐ ಜ್ಯೋತಿ ಖೋತ,ಯತೀಶ ಕೆ.ಎಸ್., ಅಶೋಕ ನಾಯಕ,ಎಫ್.ಎಸ್.ಇಂಡೀಕರ್ ಸೇರಿದಂತೆ ಆಲಮಟ್ಟಿ,ನಿಡಗುಂದಿ,ತಾಳಿಕೋಟಿ,ಮುದ್ದೇಬಿಹಾಳ,ಕೊಲ್ಹಾರ,ಕೂಡಗಿ ಪೊಲೀಸ್ ಠಾಣೆಯ ಸಿಬ್ಬಂದಿ ಬಿಗಿ ಭದ್ರತೆ ವಹಿಸಿದ್ದರು.

ಅಧಿಕಾರಿಗಳ ತಂಡ ಪ್ರತ್ಯಕ್ಷ: ರೈತರ ಹೋರಾಟ ವೇದಿಕೆಗೆ ತಹಶೀಲ್ದಾರ್ ವಿನಯಾ ಹೂಗಾರ,ತಾಪಂ ಇಒ ಅನಸೂಯಾ ಚಲವಾದಿ, ವಿವಿಧ ಇಲಾಖೆಯ ಅಧಿಕಾರಿಗಳಾದ ಚಂದ್ರಕಾoತ ಕುಂಬಾರ,ಎಸ್.ಎಸ್.ಕೋಟೆಣ್ಣವರ,ರಮೇಶ ಕೋಲಾರ, ಆರ್.ಎಸ್.ಹಿರೇಗೌಡರ,ಜ್ಞಾನೇಶ ಮುರಾಳ, ಮಹೇಶ ಜೋಷಿ, ವಿಜಯಕುಮಾರ ಬಿರಾದಾರ,ಎಸ್.ಡಿ.ಭಾವಿಕಟ್ಟಿ, ಗಿರೀಶ ಅಲಕುಡೆ,ಲಕ್ಷ್ಣಣ ಸಂಗೋಗಿ ಮೊದಲಾದವರು ಆಗಮಿಸಿ ಹೋರಾಟಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

Latest News

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ :                                     ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ವೀರಶೈವ ಸಜ್ಜನ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ