ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ಜುಲೈ ತಿಂಗಳ ಒಳಗಾಗಿ ಸಂಪೂರ್ಣ ಕಾಮಗಾರಿ ಮುಗಿಸಿಕೊಡಬೇಕು. ಆಗಷ್ಟ ಒಂದರoದು ನೀರು ಕಾಲುವೆಗೆ ನೀರು ಹರಿಸಬೇಕು. ಅವಾರ್ಡ್ ಪ್ರತಿ ನೀಡಿ, ಎಲ್ಲಾ ರೈತರಿಗೂ ಪರಿಹಾರ ನೀಡಬೇಕು. ಇನ್ನೊಮ್ಮೆ ಸರ್ವೇ ಮಾಡಿ ನ್ಯಾಯಯುತವಾಗಿ ಮಾಲ್ಕಿ ಆಸ್ತಿಗಳಿಗೂ ಪರಿಹಾರ ನೀಡಬೇಕು.ಕಾಲುವೆ ಕಾಮಗಾರಿ ಸಂಪೂರ್ಣ ಮುಗಿಸಬೇಕು. ನೀಲನಕಾಶೆಗಿಂತ ಹೆಚ್ಚಿನ ಭೂಮಿ ಕಳೆದುಕೊಂಡ ರೈತರಿಗೆ ಅವಾರ್ಡ್ ಹಾಗೂ ಪ್ರತಿ ನೀಡಬೇಕು ಎಂದು ಹೇಳಿದರು.

ಹೋರಾಟಕ್ಕೆ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ, ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪಾಲ್ಗೊಳ್ಳಲಿದ್ದು ಯೋಜನೆಗೆ ಸಂಬoಧಿಸಿದoತೆ 14ಕ್ಕೂ ಅಧಿಕ ಹಳ್ಳಿಗಳ ರೈತರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಬ.ಬಾಗೇವಾಡಿ ತಾಲ್ಲೂಕಿನ ಅಧ್ಯಕ್ಷರಾದ ಸಿದ್ರಾಮಪ್ಪ ಹೊರ್ತಿ,ನಿಡಗುಂದಿ ತಾಲೂಕಿನ ಅಧ್ಯಕ್ಷ ಸೀತಪ್ಪ ಗಣಿ,ನಿಡಗುಂದಿ ತಾಲೂಕಿನ ಉಪಾಧ್ಯಕ್ಷ ಸಾಬಣ್ಣ ಅಂಗಡಿ, ಹುಣಸಗಿ ತಾಲೂಕಿನ ಅಧ್ಯಕ್ಷ ಮಲ್ಲನಗೌಡ ನಗನೂರು ಇದ್ದರು.

ರೈತರಿಗೆ ಬಾಕಿ 46.85 ಕೋಟಿ ರೂ.ಬಾಕಿ :
ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ಮಾಹಿತಿ ಕೆಬಿಜೆಎನ್‌ಎಲ್ ಅಧಿಕಾರಿಗಳೇ ನೀಡಿರುವ ಅಧಿಕೃತ ಮಾಹಿತಿಯನ್ನು ನೀಡಿದ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ, ಒಟ್ಟು 346 ಎಕರೆ ಜಮೀನು ಈ ಯೋಜನೆಗೆ ಅಗತ್ಯವಾಗಿದ್ದು 31 ಪ್ರಕರಣಗಳು ಇವೆ.ಇದರಲ್ಲಿ ಈಗಾಗಲೇ 111 ಎಕರೆಗೆ ಸಂಬAಧಿಸಿದ 14 ಪ್ರಕರಣಗಳಿಗೆ 7.41 ಕೋಟಿ ರೂ.ಹಣ ರೈತರಿಗೆ ಪಾವತಿಸಲಾಗಿದೆ.ಇನ್ನುಳಿದ 232 ಎಕರೆ ಜಮೀನಿಗೆ ಸಂಬAಧಿಸಿದ 17 ಪ್ರಕರಣಗಳಿಗೆ ಒಟ್ಟು 46.85 ಕೋಟಿ ರೂ.ಹಣ ರೈತರಿಗೆ ಪಾವತಿಸಬೇಕಾಗಿದೆ.ಇನ್ನುಳಿದಂತೆ ಕಾಲುವೆ ಕಾಮಗಾರಿಗೆ ಸಂಬAಧಿಸಿದAತೆ ನಾಗರಬೆಟ್ಟ,ಹಿರೇಮುರಾಳ,ಸರೂರ ಗ್ರಾಮಗಳಲ್ಲಿ ನಾಲ್ವರು ರೈತರಿಂದ ಯೋಜನೆಗೆ ಕಾಲುವೆಯ ಕಾಮಗಾರಿ ನಿರ್ಮಾಣಕ್ಕೆ ಅಡ್ಡಿಪಡಿಸಲಾಗಿದೆ ಎಂದು ಇಲಾಖೆಯವರು ತಿಳಿಸಿದ್ದಾರೆ ಎಂದು ಹೇಳಿದರು.
ಸದರಿ ಯೋಜನೆಗೆ ಸಂಬoಧಿಸಿದoತೆ ಎಲ್ಲ ಬಾಕಿ ಇರುವ ಕೆಲಸಗಳನ್ನು ಅಧಿಕಾರಿಗಳು ಮುಗಿಸಬೇಕು.ಕಾಲುವೆ ಕಾಮಗಾರಿ ತಡೆಗಟ್ಟಿರುವ ರೈತರ ಮನವೊಲಿಸಿ ಅವರಿಗೆ ಅವಾರ್ಡ್ ಕಾಪಿ ಕೊಡುವ ಕಾರ್ಯ ಮಾಡಬೇಕು.ಅಲ್ಲಿಯವರೆಗೆ ನಮ್ಮ ಸಂಘದಿAದ ಧರಣಿ,ಪ್ರತಿಭಟನೆ ಮುಂದುವರೆಯಲಿದೆ ಎಂದು ಹೇಳಿದರು.

Latest News

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.