ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ.ಆದರೆ ಕೊಲ್ಲಿ ರಾಷ್ಟçಗಳ ಯುದ್ದದ ಪರಿಣಾಮ ರಸಗೊಬ್ಬರದ ಪೂರೈಕೆ ವಿತರಣೆ ಮೇಲೆ ವ್ಯತ್ಯಾಸ ಆಗದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಮಾರಾಟಗಾರರಿಗೆ ತಿಳಿವಳಿಕೆ ನೀಡಲಾಗುತ್ತದೆ.ಎಫ್.ಐ.ಡಿ ಇಲ್ಲದ ರೈತರಿಗೆ ಸಂಬOಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ತಕ್ಷಣ ಎಫ್.ಐ.ಡಿ ಮಾಡಿಕೊಟ್ಟು ಯೂರಿಯಾ ವಿತರಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ವಿಜಯಪುರ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ಎ. ಪಿ. ಬಿರಾದಾರ ಮಾತನಾಡಿ, ಯೂರಿಯಾ, ಡಿಎಪಿ ಗೊಬ್ಬರದ ವಿತರಣೆ ಬಗ್ಗೆ ಕೃಷಿ ಪರಿಕರ ಮಾರಾಟಗಾರರಿಗೆ ತಿಳಿಸಲಾಗಿದೆ.ನಿಗದಿತ ದರದಲ್ಲಿ ರಸಗೊಬ್ಬರ ಮಾರಾಟ ಮಾಡಲು ತಿಳಿಸಲಾಗಿದೆ.ರಸಗೊಬ್ಬರದ ಕೃತಕ ಅಭಾವ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಸಂಬOಧಿಸಿದ ಮಾರಾಟಗಾರರ ಲೈಸನ್ಸ್ ರದ್ದುಗೊಳಿಸುವುದು,ಕ್ರಿಮಿನಲ್ ಕೇಸ್ ದಾಖಲಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಹೇಳಿದರು.

ಜಾರಿದಳದ ಇನ್ನೋರ್ವ ಸಹಾಯಕ ನಿರ್ದೇಶಕಿ ರೇಷ್ಮಾ ಸುತಾರ್ ಮಾತನಾಡಿ, ಯೂರಿಯಾ ಗೊಬ್ಬರವನ್ನು ದೊಡ್ಡ ರೈತರಿಗೆ ಹೆಚ್ಚು ಸಣ್ಣ ರೈತರಿಗೆ ಕಡಿಮೆ ಪ್ರಮಾಣದಲ್ಲಿ ವಿತರಿಸದೇ ಆದ್ಯತೆ ಮೇರೆಗೆ ಎಲ್ಲರಿಗೂ ದೊರೆಯುವಂತೆ ನೋಡಿಕೊಳ್ಳಬೇಕು.ಮೊದಲು ನಮ್ಮ ಜಿಲ್ಲೆ, ತಾಲ್ಲೂಕಿನ ರೈತರಿಗೆ ಯೂರಿಯಾ ಗೊಬ್ಬರ ದೊರೆಯಬೇಕು.ನಂತರ ಬೇರೆ ಜಿಲ್ಲೆ,ತಾಲ್ಲೂಕಿನ ರೈತರಿಗೆ ಆದ್ಯತೆ ನೀಡಬಹುದಾಗಿದೆ ಎಂದು ಹೇಳಿದರು.

ತಾಂತ್ರಿಕ ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ,ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಿಕಿನಾಳ,ಮುದ್ದೇಬಿಹಾಳ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸೋಮನಗೌಡ ಬಿರಾದಾರ,ಕೃಷಿ ಪರಿಕರ ಮಾರಾಟಗಾರರ ಪ್ರತಿನಿಧಿ ಶಿವಶಂಕರಗೌಡ ಹಿರೇಗೌಡರ ಹಾಗೂ ಮುದ್ದೇಬಿಹಾಳ,ತಾಳಿಕೋಟಿ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರು ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು