ತೂತುಕುಡಿ: ಪಟಾಕಿ ಕಾರ್ಖಾನೆ ಸ್ಫೋಟಗೊಂಡು (Fire accident) ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಮೃತರು ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂದು ತಿಳಿದು ಬಂದಿದೆ.
ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕಣಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡವರು ಎನ್ನಲಾಗಿದೆ. ಗಾಯಗೊಂಡವರನ್ನು ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಕಸ್ಮಿಕ ಸ್ಫೋಟದಿಂದಾಗಿ (Fire accident) ಗೋಡೌನ್ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.