ಚಿಕ್ಕೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆಸಿಕೊಂಡ ವಿಲಕ್ಷಣ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ಮಹೇಶ್ ಹುಣ್ಣರಗಿ (22 ವರ್ಷ) ಎಂಬ ಯುವಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಸಿದ್ದರಾಮಯ್ಯ ಜುಗುಳ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಯನ್ನು ನೋಡಲು ಮಹೇಶ್ ಮೇಲ್ಟಾವಣಿ ಮೇಲೆ ಹತ್ತಿದ್ದಾನೆ. ಈ ವೇಳೆ ವಿದ್ಯುತ್ ತಗುಲಿ ಮುಖ, ಕೈ ಭಾಗಕ್ಕೆ ಗಂಭೀರ ಗಾಯಗಳಾಗಿವೆ.
ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿದ್ದ ಅಂಬುಲೆನ್ಸ್ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗಿದೆ.