ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಬೈಕ್’ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ.
ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸುರಪುರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.