ಇಳಕಲ್; ನಗರದ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆ ಎಸಿ ಓ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಪುರುಷೋತ್ತಮ ದರಕ್ ನೆರವೇರಿಸಿದ್ರು.
ರೋಜಾರೋಹಣಕ್ಕೂ ಮುನ್ನ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
Join Our Telegram: https://t.me/dcgkannada
ನಂತರ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದದವರು ಹಾಗೂ ನೂರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸ್ವತಂತ್ರೋತ್ಸವದ ಧ್ವಜಾರೋಹಣ ನೆರವೇರಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪುರುಷೋತ್ತಮ್ ದರಕ್, ಲಕ್ಷಾಂತರ ಜನರು ಸ್ವಾತಂತ್ರ್ಯಕ್ಕಾಗಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಂತಹ ಪುಣ್ಯಾತ್ಮರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಅಂತಹ ಮಹನೀಯರ ತ್ಯಾಗ ಬಲಿದಾನ ವ್ಯರ್ಥವಾಗಬಾರದು ಎಂದಾದರೆ ವಿದ್ಯಾರ್ಥಿಗಳು ಅತ್ಯುತ್ತಮ ರೀತಿಯಲ್ಲಿ ತಮ್ಮ ವಿದ್ಯಾಭ್ಯಾಸ ದೇಶ ಪ್ರಗತಿಯತ್ತ ಸಾಗುವಲ್ಲಿ ಕೈಜೋಡಿಸಬೇಕು. ಆಗ ಮಾತ್ರ ಸ್ವತಂತ್ರಕ್ಕಾಗಿ ಕ್ಷಮಿಸಿದ್ದವರಿಗೆ ನಾವು ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ ಧ್ವಜಾರೋಹಣ
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.