ಆರೋಗ್ಯ ಉಚಿತ ತಪಾಸಣೆ ಶಿಬಿರ: ಸ್ವಯಂ ನಿಯಂತ್ರಣದಿOದ ಏಡ್ಸ್ ರೋಗಕ್ಕೆ ಕಡಿವಾಣ-ಡಾ.ಬಾಲಕೃಷ್ಣರೆಡ್ಡಿ

ಆರೋಗ್ಯ ಉಚಿತ ತಪಾಸಣೆ ಶಿಬಿರ: ಸ್ವಯಂ ನಿಯಂತ್ರಣದಿOದ ಏಡ್ಸ್ ರೋಗಕ್ಕೆ ಕಡಿವಾಣ-ಡಾ.ಬಾಲಕೃಷ್ಣರೆಡ್ಡಿ

ಮುದ್ದೇಬಿಹಾಳ : ಅಸುರಕ್ಷಿತ ಕ್ರಮಗಳಿಂದ ಏಡ್ಸ್ ರೋಗ ಹರಡುತ್ತಿದ್ದು ಅದನ್ನು ತಡೆಗಟ್ಟಲು ಸ್ವಯಂ ನಿಯಂತ್ರಣದಿOದ ಸಾಧ್ಯ ಎಂದು ಬೆಂಗಳೂರು ಸರ್ದಾರ್ ವಲ್ಲಭ್‌ಬಾಯಿ ಪಟೇಲ್ ಸೊಸೈಟಿ ಮುಖ್ಯಸ್ಥ ಡಾ.ಬಾಲಕೃಷ್ಣ ರೆಡ್ಡಿ ಹೇಳಿದರು.

ತಾಲ್ಲೂಕು ಢವಳಗಿ ಮಡಿವಾಳೇಶ್ವರ ಉಚಿತ ಪ್ರಸಾದ ನಿಲಯದ ಆವರಣದಲ್ಲಿ ಬೆಂಗಳೂರಿನ ಸರ್ದಾರ್ ವಲ್ಲಭ್‌ಬಾಯಿ ಪಟೇಲ್ ಸೊಸೈಟಿ ನೇತೃತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಈಚೇಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಏಡ್ಸ್ ರೋಗ ಬಂದಾಗ ಅದಕ್ಕೆ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ಸಂಭವನೀಯ ಸಾವನ್ನು ತಪ್ಪಿಸಬಹುದಾಗಿದೆ.ಇದಕ್ಕೆಂದು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ,ಔಷಧೋಪಚಾರ ದೊರೆಯುತ್ತದೆ.ಆದರೆ ರೋಗ ಬಂದ ಮೇಲೆ ಪರದಾಡುವುದಕ್ಕಿಂತ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಶಿಬಿರದ ಸಂಘಟಕ ಮಲ್ಲಿಕಾರ್ಜುನ ಸಿದರೆಡ್ಡಿ ಮಾತನಾಡಿ, ಪ್ರತಿ ಅಮವಾಸ್ಯೆಯ ಮರುದಿನ ಶಿಬಿರ ಢವಳಗಿ ಬದಲಾಗಿ ಮುದ್ದೇಬಿಹಾಳ ನಗರದಲ್ಲಿ ಸಂಘಟಿಸಲು ನಿರ್ಧರಿಸಲಾಗಿದೆ.ಸ್ಥಳವನ್ನು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

ಆಕ್ಯುಪ್ರೆಶರ್ ಮೂಲಕ ಉಚಿತವಾಗಿ ತಪಾಸಣೆ ನಡೆಸಲಾಯಿತು.ಇದೇ ಸಮಯದಲ್ಲಿ ಚಿಕಿತ್ಸೆ ಪಡೆದುಕೊಂಡವರು ಗುಣಮುಖರಾದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊAಡರು.ಈ ಸಂದರ್ಭದಲ್ಲಿ ಸೊಸೈಟಿಯ ಉಮೇಶ ಕಮ್ಮಾರ, ಸಂದೇಶ, ಹರೀಶ, ಅನು, ಮಾಲೀನಿ, ಪ್ರೊ.ಪರಮೇಶಪ್ಪ ಕೊರವರ, ಎಸ್.ಬಿ.ಬಿರಾದಾರ, ಮಲ್ಲಣ್ಣ ಗೂಳಿ, ಅಂಬರೀಶ ಗಂಗನಗೌಡರ ಮೊದಲಾದವರು ಇದ್ದರು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್