Free Health Checkup Camp for Narega Labourers

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ

ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ ಕೆರೆ ಹೂಳೆತ್ತುವುದು ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ ಗುರುವಾರ ನಡೆಯಿತು.

ಹಡಲಗೇರಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮಾಹಿತಿ, ಶಿಕ್ಷಣ ಹಾಗೂ ಸಂಹವನ ಕಾರ್ಯಕ್ರಮ ಹಾಗೂ ಅರೋಗ್ಯ ಇಲಾಖೆ ಸಹಯೋಗದಲ್ಲಿ ಅರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

ಅರೋಗ್ಯ ಉಚಿತ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಸ್.ಎಸ್.ಗಣಚಾರಿ, ಹಡಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ನಾಳ ಗ್ರಾಮದ ನರೇಗಾ ಕೂಲಿಕಾರರಿಗೆ ಕಳೆದ ಒಂದು ತಿಂಗಳಿಂದ ಕೂಲಿ ಕೆಲಸ ಒದಗಿಸಲಾಗಿದೆ. ಖಾತ್ರಿ ಯೋಜನೆಯಡಿ ನಿರಂತರ ಕೆಲಸ ನೀಡಲಾಗಿದ್ದು, ವಲಸೆ ಪ್ರವೃತ್ತಿ ಕಡಿಮೆಯಾಗಿದೆ ಎಂದು ಹೇಳಿದರು.

ನರೇಗಾ ಯೋಜನೆಯಡಿ ದುಡಿದ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಬಿಸಿಲಿನಲ್ಲಿ ಸತತ ಕೆಲಸ ಮಾಡುವುದರಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ. ಕೂಲಿಕಾರರ ಸದೃಢ ಆರೋಗ್ಯಕ್ಕೆ ಶಿಬಿರ ಏರ್ಪಡಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಅರೋಗ್ಯ ಇಲಾಖೆಯ ಅಧಿಕಾರಿಗಳು ಕೂಲಿಕಾರರ ಅರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ, ಮಲೇರಿಯಾ ಹಾಗೂ ಕಫ ಪರೀಕ್ಷೆ ಮಾಡಿ ಸಮಾಲೋಚನೆ ಮಾಡಿದರು.

ನರೇಗಾ ಯೋಜನೆ ತಾಲೂಕು ಐಇಸಿ ಸಂಯೋಜಕ ಪರಮೇಶ ಹೊಸಮನಿ, ಆರೋಗ್ಯ ನಿರೀಕ್ಷಾಧಿಕಾರಿ ಸಿ.ಜಿ.ಬಿದರಕುಂದಿ, ಸಿಎಚ್ ಇ ಮಂಜುನಾಥ, ಉಪಾಧ್ಯಕ್ಷರಾದ ಶ್ರೀಮತಿ ಲಕ್ಷ್ಮೀಬಾಯಿ ಮ. ಪರಪ್ಪಗೋಳ, ಡಿಇಒ ಮಲ್ಲಿಕಾರ್ಜುನ ಬಿದರಕುಂದಿ, ಗ್ರಾ.ಪಂ. ಸಿಬ್ಬಂದಿ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು