From Betrothal House to Masanadeda: Dream of marriage dashed by accident

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ.

ಎರಡು ದಿನಗಳ ಹಿಂದೆ ಸಾಗರ ತಾಲೂಕಿನ ಮೂರಕೈ ಗ್ರಾಮದ ಶ್ವೇತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಜರುಗಿತ್ತು. ನಿಶ್ಚಿತಾರ್ಥ ಮುಗಿಸಿಕೊಂಡು ಕುಳಗೇರಿ ಕ್ರಾಸ್ ಗೆ ಕಾರಿನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆಯ ಕುಸಗಲ್ ಬಳಿಯ ಇಂಗಳಹಳ್ಳಿ ಕ್ರಾಸ್ ನಲ್ಲಿ ಅಫಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ, ಕಾರ್ ನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ನಿಶ್ಚಿತಾರ್ಥ ಮುಗಿಸಿಕೊಂಡು ಹಸೆಮಣೆ ಏರಬೇಕಾಗಿದ್ದ ಯುವತಿ ಶ್ವೇತಾ (29), ಅಂಜಲಿ (26), ವಿಠ್ಠಲ (55), ಶಶಿಕಲಾ (40) ಮತ್ತು ಸುದೀಪ್ (26) ಎಂದು ಗುರುತಿಸಲಾಗಿದೆ. ಈ ಕುಟುಂಬ ಕಳೆದ 40 ವರ್ಷಗಳಿಂದ ಕುಳಗೇರಿ ಕ್ರಾಸ್ ನಲ್ಲಿ ಹೊಟೇಲ್ ಉಧ್ಯಮ ನಡೆಸುತ್ತಿದ್ದರು.

ನಿಶ್ಚಿತಾರ್ಥ ಮುಗಿಸಿಕೊಂಡು ಕುಳಗೇರಿ ಕ್ರಾಸ್ ಗೆ ಮರಳುವಾಗ ಜವರಾಯ ಅಟ್ಟಹಾಸ ಮೆರೆದಿದ್ದು, ಐವರು ಸಾವನಪ್ಪಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ