ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ.

ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97 ಅಂಕ ಸೇರಿ ಒಟ್ಟು ಸೃಷ್ಟಿಗೆ 621 ಅಂಕ ಬಂದಿದ್ದವು.ಅಷ್ಟಕ್ಕೆ ಸಮಾಧಾನಗೊಳ್ಳದೇ ಪಾಲಕರು,ಶಾಲೆಯ ಶಿಕ್ಷಕರ ಮಾರ್ಗದರ್ಶನದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ವಿಜ್ಞಾನ ವಿಷಯದಲ್ಲಿ ಮೂರು, ಇಂಗ್ಲಿಷ್ ವಿಷಯದಲ್ಲಿ ಒಂದು ಅಂಕ ಸೇರಿ ಒಟ್ಟು 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

ನಾಲತವಾಡದ ವೈದ್ಯ ದಂಪತಿ ಸಿದ್ದನಗೌಡ ಪಾಟೀಲರ ಪುತ್ರಿಯಾಗಿರುವ ಸೃಷ್ಟಿ ಸಾಧನೆ ಇಡೀ ಜಿಲ್ಲೆಯ ಹೆಸರನ್ನು ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಮಿಂಚುವAತೆ ಮಾಡಿದೆ.

ಮರುಮೌಲ್ಯಪಾಪನದಲ್ಲಿ ಪೂರ್ಣ ಅಂಕ ಬಂದ ಸುದ್ದಿ ತಿಳಿಯುತ್ತಲೇ ಸುದ್ದಿಗಾರರೊಂದಿಗೆ ಮಾತನಾಡಿದ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ, ನಮ್ಮ ಸಂಸ್ಥೆಯಿoದ ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ sಸೌಜನ್ಯ ಕಂದಕೂರ ನಂತರ ಎರಡನೇ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿರುವುದು ಖುಷಿ ತಂದಿದೆ.ಮರುಮೌಲ್ಯಮಾಪನದಲ್ಲಿ ನಮಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿಯಿAದ ಅಭಿನಂದಿಸುತ್ತೇವೆ ಎಂದು ತಿಳಿಸಿದರು.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ,ಕಾರ್ಯದರ್ಶಿ ವಿಜಯಕುಮಾರ ಪಾಟೀಲ,ಮಾರ್ಗದರ್ಶಕರಾದ ಎನ್.ಎ.ಬಿರಾಜದಾರ,ನಿರ್ದೇಶಕ ದರ್ಶನಗೌಡ ಪಾಟೀಲ,ಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ,ರೇವಣಸಿದ್ದ ಚಲವಾದಿ(ಮುರಾಳ) ಮತ್ತಿತರರು ಅಭಿನಂದಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ