ಬೆಂಗಳೂರು: ಗಂಗಾವತಿ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ. ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ.
ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಹಾಗೂ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.