ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಿದ್ದಾರೆ.
ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.
ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ ಹಿಂದೆ ಪಾಲಿಕೆಯ ನೆಲ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.
ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!
ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ ಮಾಜಿ ಸದಸ್ಯರು ತಿಳಿಸಿದ್ದಾರೆ.