Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ