Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಬೆಂಗಳೂರು: ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು (Gold Theft) ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ ಎಂದು ತಿಳಿದು ಬಂದಿದೆ. (Gold Theft)

ಆರೋಪಿಯಿಂದ 5.50 ಲಕ್ಷ ರೂಪಾಯಿ ಮೌಲ್ಯದ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿ ಚಂದ್ರಿಕಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ದೂರುದಾರೆ ಚಂದ್ರಿಕಾ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿಯಾಗಿದ್ದಾರೆ. ಪೇಯಿಂಗ್ ಗೆಸ್‌ವೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾರೆ. ಇವರ ಪತಿ ಶರವಣ ಸರಕು ಸಾಗಣೆ ವಾಹನದ ಚಾಲಕನಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಆ.15ರಂದು ಅತ್ತಿಗೆ ಶಶಿಕಲಾ ಅವರ ದೊಡ್ಡತೋಗೂರು ನಿವಾಸಕ್ಕೆ ತೆರಳಿದ್ದರು. ಈ ವೇಳೆ ಚಂದ್ರಿಕಾ ಸಹ ಅಕ್ಕ ಶಶಿಕಲಾ ಮನೆಗೆ ಬಂದಿದ್ದು, ಪತಿಗೆ ಫಾರ್ಮಾ ಸಿಯಲ್ಲಿ ಔಷಧಿ ತರುವಂತೆ ತನ್ನ ಬೈಕ್ ಕೀ ನೀಡಿದರು.

ಔಷಧಿ ತರಲು ಹೋಗಿ ತಂಗಿ ಮನೆಯಲ್ಲೇ ಕಳ್ಳತನ:

ಈ ವೇಳೆ ಶಶಿಕಲಾ, ಬೈಕ್‌ನಲ್ಲಿ ಬೊಮ್ಮನ ಹಳ್ಳಿಯ ಹೊಸೂರು ರಸ್ತೆಯಲ್ಲಿ ವಾಸವಿರುವ ದೊಡ್ಡಮ್ಮನ ಮನೆಗೆ ಬಂದಿದ್ದಾಳೆ. ಈ ವೇಳೆ ದ್ವಿಚಕ್ರ ವಾಹನದ ಕೀ ಬಂಚ್‌ನಲ್ಲಿ ಶಶಿಕಲಾ ತಂಗಿ ಚಂದ್ರಿಕಾಳ ಮನೆಯ ಕೀ ಇರುವುದನ್ನು ಗಮನಿಸಿದ್ದಾಳೆ. ಬಳಿಕ ಜತೆಯಲ್ಲಿ ದೊಡ್ಡ ಮೃನ ಕರೆದುಕೊಂಡು ಆಡುಗೋಡಿಯ ವಿಎಸ್‌ಆರ್ ಲೇಔಟ್‌ಗೆ ಬಂದಿದ್ದು, ತಂಗಿ ಮನೆಯ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿದ್ದಾಳೆ. ನೀನು ಇಲ್ಲೇ ಇರು. ನಾನು ಔಷಧಿ ತರುತ್ತೇನೆ ಎಂದು ಹೇಳಿ ಚಂದ್ರಿಕಾಳ ಮನೆಯತ್ತ ತೆರಳಿದ್ದಾಳೆ. ಬಳಿಕ ಕೀನಿಂದ ಮನೆ ಬಾಗಿಲು ತೆರೆದು ಮನೆ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದಾಳೆ. ಬಳಿಕ ದೊಡ್ಡಮ್ಮನ ಜತೆಗೆ ಔಷಧಿ ತೆಗೆದುಕೊಂಡು ಮನೆಗೆ ಬಂದು ಚಂದ್ರಿಕಾಗೆ ಬೈಕ್ ಕೀ ನೀಡಿದ್ದಾಳೆ.

ಸಿಸಿಟಿವಿ ಸುಳಿವು ಆಧರಿಸಿ ಬಂಧನ:

ಪತಿ ಶರವಣನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಆ.20ರಂದು ಮನೆಗೆ ತೆರಳಿ ರುವ ಚಂದ್ರಿಕಾ, ಬೀರು ನೋಡಿದಾಗ ಚಿನ್ನ ಹಾಗೂಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನಮೇರೆಗೆ ತನಿಖೆಗೆ ಇಳಿದಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಮಾಡಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದಾಗ, ಶಶಿಕಲಾಳ ಚಲನವಲನ ಸೆರೆಯಾಗಿರು ವುದು ಕಂಡು ಬಂದಿದೆ. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಂಗಿಯ ಮನೆಯಲ್ಲಿ ತಾನೇ ಕಳವು ಮಾಡಿದ್ದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ನಮಾಜ್ ವಿರಾಮ ರದ್ದು!

ಕದ್ದ ಚಿನ್ನಾಭ ರಣಗಳ ಪೈಕಿ ಕೆಲವನ್ನು ಮನೆಯಲ್ಲೇ ಇರಿಸಿ ದ್ದಳು. ಕೆಲವು ಆಭರಣಗಳನ್ನು ಶಿಕಾರಪಾಳ್ಯ ದೆ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇರಿಸಿದಳು. ಆರೋಪಿ ಮಾಹಿತಿ ಮೇರೆಗೆ ಆರಭರಣಗಳನ್ನು ಜಪ್ತಿ ಮಾಡಲಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು