Good news: This is a golden opportunity for farmers

Good news: ರೈತರಿಗೆ ಇದು ಸುವರ್ಣ ಅವಕಾಶ

Good news: ರೈತರಿಗೆ ಇದು ಸುವರ್ಣ ಅವಕಾಶ

ಬೆಂಗಳೂರು: ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಗಂಗಾ ಕಲ್ಯಾಣ ಯೋಜನೆಯ (Ganga kalyana scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.

Join Our Telegram: https://t.me/dcgkannada

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಸಿಗುತ್ತದೆ.

ಒಟ್ಟು 4 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಈ ಯೋಜನೆ ಅಡಿ ಪಡೆಯಬಹುದಾಗಿದೆ.

ಯಾವೆಲ್ಲ ರೈತರು ಅರ್ಹರು?

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ವ್ಯವಸಾಯ ನಿರತರಾಗಿಬೇಕು. ಕನಿಷ್ಠ 02 ಎಕರೆ ಜಮೀನನ್ನು ಹೊಂದಿರಲೇಬೇಕು.

ಈ ಹಿಂದೆ ನೀರಾವರಿ ಸೌಲಭ್ಯ ಪಡೆದಿರಬಾರದು. ಈಗಾಗಲೇ ನೀರಾವರಿ ಜಮೀನು ಹೊಂದಿರಬಾರದು. ಕನಿಷ್ಠ 18 ರಿಂದ ಗರಿಷ್ಠ 60 ವರ್ಷದೊಳಗಿರಬೇಕು. ಆದಾಯದ ಮಿತಿ ವಾರ್ಷಿಕವಾಗಿ ಗ್ರಾಮೀಣ ಪ್ರದೇಶವಾದರೆ 98 ಸಾವಿರ ರೂಪಾಯಿ, ನಗರ ಪ್ರದೇಶವಾದರೆ 1.20 ಲಕ್ಷ ರೂಪಾಯಿ ಒಳಗಿರಬೇಕು.

ಏನೆಲ್ಲ ದಾಖಲೆ ಇರಬೇಕು?

ಜಾತಿ ಪ್ರಮಾಣಪತ್ರ, ಸಣ್ಣ ಹಿಡುವಳಿದಾರರ ಪ್ರಮಾಣಪತ್ರ, ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಅರ್ಜಿದಾರರ ಭಾವಚಿತ್ರ ಹೊಂದಿರಬೇಕು.

ಇದನ್ನೂ ಓದಿ: Astrology: ಇವರಿಗೆ ಇಂದು ಭರ್ಜರಿ ರಾಜಕೀಯ ಯೋಗ!

ಅರ್ಜಿ ಹಾಕಲು ಬಯಸುವವರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ