Government PU College student commits suicide

ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಕೃಷ್ಣ ನದಿಯಲ್ಲಿ ಶವ ಪತ್ತೆ

ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಕೃಷ್ಣ ನದಿಯಲ್ಲಿ ಶವ ಪತ್ತೆ

ಮುದ್ದೇಬಿಹಾಳ : ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆ.14 ರಂದು ನಡೆದಿದ್ದು ಸೋಮವಾರ ವಿದ್ಯಾರ್ಥಿನಿ ಶವ ಪತ್ತೆ ಆಗಿದೆ.

ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಯುವತಿ ಬಾಲವ್ವ ಆರ್.ಕಮರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ‌ ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆಯೇ ನದಿಗೆ ಹಾರಿದ್ದ ಯುವತಿ ಶವ ಪತ್ತೆಗೆ ಮುದ್ದೇಬಿಹಾಳ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನದಿಯಿಂದ ವಿದ್ಯಾರ್ಥಿನಿ ಬಾಲವ್ವ ಶವ ಹೊರ ತೆಗೆದಿದ್ದಾರೆ.

ಇಳಕಲ್ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿನಿ ಬಾಲವ್ವ ಓದುತ್ತಿದ್ದಳು. ಅನಾರೋಗ್ಯದ ಕಾರಣ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಯುವತಿಯ ಪೋಷಕರು ದೂರು ನೀಡಿದ್ದಾರೆ ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.