ಮುದ್ದೇಬಿಹಾಳ : ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆ.14 ರಂದು ನಡೆದಿದ್ದು ಸೋಮವಾರ ವಿದ್ಯಾರ್ಥಿನಿ ಶವ ಪತ್ತೆ ಆಗಿದೆ.
ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಯುವತಿ ಬಾಲವ್ವ ಆರ್.ಕಮರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆಯೇ ನದಿಗೆ ಹಾರಿದ್ದ ಯುವತಿ ಶವ ಪತ್ತೆಗೆ ಮುದ್ದೇಬಿಹಾಳ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನದಿಯಿಂದ ವಿದ್ಯಾರ್ಥಿನಿ ಬಾಲವ್ವ ಶವ ಹೊರ ತೆಗೆದಿದ್ದಾರೆ.
ಇಳಕಲ್ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿನಿ ಬಾಲವ್ವ ಓದುತ್ತಿದ್ದಳು. ಅನಾರೋಗ್ಯದ ಕಾರಣ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಯುವತಿಯ ಪೋಷಕರು ದೂರು ನೀಡಿದ್ದಾರೆ ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.