Gram Panchayat Deputy Election: Revised schedule published

ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದ 265 ಗ್ರಾಮ ಪಂಚಾಯತ್ ಸ್ಥಾನಗಳ ಉಪ‌ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 25 ರಂದು ಮತದಾನ ನಡೆಯಲಿದ್ದು, 28 ರಂದು ಮತ ಎಣಿಕೆ ನಡೆಯಲಿದೆ.

ಮೇ 11 ರಂದು ನಡಯಬೇಕಿದ್ದ ಮತದಾನವನ್ನು ರಾಜ್ಯ ಸರ್ಕಾರದ ಮನವಿಯ ಮೇರೆಗೆ ಚುನಾವಣಾ ಆಯೋಗ ಮೂಂದುಡಿದೆ. ಈಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ.

ಮೇ 8 ರಂದು ಉಪಚುನಾವಣೆಯ ಅಧಿಸೂಚನೆ ಪ್ರಕಟಿಸಲಿದ್ದು, ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 15ರಂದು ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ. ಮೇ 17ರಂದು ನಾಮಪತ್ರಗಳ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಮೇ 25 ರಂದು ಮತದಾನ ನಡೆಯಲಿದೆ. ಅಗತ್ಯ ಬಿದ್ದರೆ ಮೇ 27ರಂದು ಮರು ಮತದಾನ ನಡೆಸಲಾಗುವುದು. ಮೇ 28ರಂದು ಮತ ಎಣಿಕೆ ನಡೆಸಲಾಗುವುದು.

ರಾಜ್ಯದ 31 ಜಿಲ್ಲೆಗಳ 135 ತಾಲೂಕಿನ 223 ಗ್ರಾಮ ಪಂಚಾಯಿತಿಗಳ 265 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Latest News

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ :                             ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ : ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ಮುದ್ದೇಬಿಹಾಳ : ಸತ್ಯದ ಪರವಾಗಿರುವ ವರದಿಗಳಿಗೆ ಸದಾ ಸಾಮಾಜಿಕವಾಗಿ ಸ್ಪಂದನೆ ಇದ್ದೇ ಇರುತ್ತದೆ.ವರದಿಯನ್ನು ಉತ್ಪೇಕ್ಷೆಯಾಗಿ ಮಾಡಿದರೆ ಅದು ಸಮಾಜದ ದಾರಿ ತಪ್ಪಿಸುವಂತಾಗುತ್ತದೆ ಎಂದು ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಡಿಜಿಟಲ್ ಸುದ್ದಿವಾಹಿನಿಯ ಕ್ಯಾಲೆಂಡರ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುದ್ರಣ ಮಾಧ್ಯಮದ ಜೊತೆಗೆ ಇಂದು ಡಿಜಿಟಲ್ ಮಾಧ್ಯಮಗಳು ತಮ್ಮ ಶಕ್ತಿ ಹೆಚ್ಚಿಸಿಕೊಂಡಿವೆ.ಜಗತ್ತಿನ ಯಾವುದೇ ಮೂಲೆಯಲ್ಲಿ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3 ಎ. 6-10 ಎ-ಗು ಜಮೀನು ಪರ್ವತಗೌಡ ತಂ/ ಚನ್ನಮಲ್ಲಪ್ಪ ಹೆಸರಿಗೆ ಇದ್ದು, ಮೃತಪಟ್ಟಿದ್ದು, ಮೃತರಿಗೆ 2 ಜನ ಹೆಂಡತಿಯರಿದ್ದು, ಕಾನೂನು ಬದ್ಧವಾಗಿ ಮೊದಲನೇ ಹೆಂಡತಿ ಮಕ್ಕಳ ಹೆಸರಿಗೆ ವಾರಸಾ ವರ್ಗಾವಣೆ ಮಾಡದೇ, ನಕಲಿ ದಾಖಲೆ ಸೃಷ್ಟಿಸಿ, ಮಕ್ಕಳಿಲ್ಲದ 2ನೇ ಹೆಂಡತಿಗೆ ವರ್ಗಾವಣೆ ಆಗಿದ್ದು, ರದ್ದುಪಡಿಸಿ, ತಹಸೀಲ್ದಾರರು, ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ