ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಎಸ್.ಡಿ.ಎಗಳನ್ನು ನಿಯೋಜಿಸಿರುವುದನ್ನು ಕೈ ಬಿಡಬೇಕು ಎಂದು ತಹಸೀಲ್ದಾರ್‌ರಗೆ ಗ್ರಾಪಂ ನೌಕರರು ಗುರುವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಪಂ ನೌಕರರು, ತಹಸೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಗ್ರಾಮ ಪಂಚಾಯಿತಿಗೆ ಸಂಬAಧಿಸಿದAತೆ ಸಾಮಾನ್ಯ ಸಭೆ ನಿರ್ವಹಣೆ, ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿ,ಕರ ವಸೂಲಾತಿ ಆಂದೋಲನ, ಇಸ್ವತ್ತು ಉತಾರೆ ಜನನ-ಮರಣ ಉತಾರೆ ವಿತರಿಸುವುದು ಅವಶ್ಯವಿರುತ್ತದೆ.ಒಂದುವೇಳೆ ನಾವು ಪಂಚಾಯಿತಿಯಲ್ಲಿ ಇಲ್ಲದಿದ್ದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.ರೈತರಿಗೆ ಸಂಬAಧಿಸಿದAತೆ ಬೆಳೆ ಕಟಾವು ಮಾಡುವುದು, ಇಲಾಖೆಯ ಆನಲೈನ್ ಸೇವೆಗಳು ನಿರ್ವಹಿಸುವುದು,ಸೆ.17 ರಿಂದ ಅ.2ರವರೆಗೆ ಗಾಂಧೀಜಿ ಜಯಂತಿ ನಿಮಿತ್ಯ ವಿಶೇಷ ಅಭಿಯಾನ ಸ್ವಚ್ಛತಾ ಅಭಿಯಾನ,ವಾರ್ಡಸಭೆ, ಗ್ರಾಮಸಭೆ ನಡೆಸಿ ತಾಪಂ ಕಚೇರಿಗೆ ಸಲ್ಲಿಸುವ ಜವಾಬ್ದಾರಿ ಕಾರ್ಯದರ್ಶಿಗಳು,ಎಸ್‌ಡಿಎಗಳಿಗೆ ಇರುತ್ತದೆ.ಆದ್ದರಿಂದ ಈ ಎಲ್ಲ ಕೆಲಸಗಳ ಒತ್ತಡದ ಮಧ್ಯೆ ನಮಗೆ ತರಬೇತಿಯನ್ನೂ ನೀಡದೇ ಕೇಂದ್ರಸ್ಥಾನದಲ್ಲಿಯೇ ಸಮೀಕ್ಷೆಗೆ ನಿಯೋಜಿಸದೇ ಬೇರೊಂದು ಸ್ಥಳಕ್ಕೆ ನೇಮಿಸಿರುವುದು ಹತ್ತಾರು ತೊಂದರೆಗೆ ಕಾರಣವಾಗುತ್ತದೆ.ಕೂಡಲೇ ಸಮೀಕ್ಷೆ ಕಾರ್ಯದಿಂದ ಗ್ರಾಪಂ ಕಾರ್ಯದರ್ಶಿ,ಎಸ್.ಡಿ.ಎ ಅವರನ್ನು ಕೈ ಬಿಡಬೇಕು ಎಂದು ವಿನಂತಿಸಿದರು.

ಮನವಿ ಸಲ್ಲಿಕೆ ಸಮಯದಲ್ಲಿ ಎಸ್.ವಾಯ್.ದ್ಯಾಮಗೊಂಡ, ಅಶೋಕ ಕೊರವೇರ, ಎ.ಎಸ್.ಬಿರಾದಾರ, ರಂಗರಾಜು, ಪಿ.ವಾಯ್.ಚಲವಾದಿ, ಜಿ.ಎಲ್.ಬಿರಾದಾರ, ಸಿ.ಬಿ.ಹೊಳಿ, ಟಿ.ಎಂ.ಕೋಲಕಾರ, ಎಸ್.ಎಸ್.ಬಂಗಾರಗುAಡ ,ಯಮನೂರಿ ಲಮಾಣಿ, ಸಿ.ಎನ್.ಊರನ್ನವರ,ಜಿ.ಎಸ್.ಬಿರಾದಾರ,ಬಿ.ಬಿ.ಬಿರಾದಾರ, ರವಿಕಾಂತ ಮೇಟಿ, ಬಾಬು ಪೋತೆಗೋಳ ಇದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ