ಮುದ್ದೇಬಿಹಾಳ : ತಾಲ್ಲೂಕಿನ ಚವನಬಾವಿಯ ಹಿರಿಯ ಪತ್ರಕರ್ತ ಬಸವರಾಜ ಈ. ಕುಂಬಾರ ಅವರ ಪುತ್ರಿ ಭಾಗ್ಯಶ್ರೀ ಕುಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾನಿಪ ಸಂಘದಿoದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ,ಎಸ್ಪಿ ಲಕ್ಷ್ಮಣ (LAXMAN) ನಿಂಬರಗಿ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸೇರಿದಂತೆ ಕಾನಿಪ ಸಂಘದ ಜಿಲ್ಲಾ ಪದಾಧಿಕಾರಿಗಳು ಇದ್ದರು.
ಪತ್ರಕರ್ತ ಬಸವರಾಜ ಕುಂಬಾರ ಅವರ ಮಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಾಗರಬೆಟ್ಟದ ಎಸ್‌ಡಿಕೆ ಪ್ರೌಢಶಾಲೆಯಲ್ಲಿ ಓದಿದ್ದಾಳೆ.