ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ ಲಭಿಸಿದೆ.
ಮಹರ್ಷಿ ವಾಲ್ಮೀಕಿ ಗುರುಕುಲ ಪೀಠ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ನೌಕರರ ವಿಭಾಗದ ಕ್ರೀಡಾಕೂಟದಲ್ಲಿ ರಾಷ್ಟçಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಸಾಧನೆಗಾಗಿ ಗುಡಿಮನಿ ಅವರಿಗೆ ನೀಡಲಾಗಿದೆ.ಅ.26 ರಂದು ಪ್ರಶಸ್ತಿಯನ್ನು ದೊಡ್ಡಬಳ್ಳಾಪುರದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಅಧ್ಯಕ್ಷ ಪಿ.ಮೋಹನ್ ಕಿಶೋರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







