ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ.

ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು.

ಕಾಂಕ್ರಿಟ್ ಮಿಕ್ಸರ್‌ನಲ್ಲಿ ಕೈ ಸಿಲುಕಿ ತೀವ್ರ ನೋವಿನಿಂದ ಒದ್ಡಾಡುತ್ತಿದ್ದ ಅವರನ್ನು ತಕ್ಷಣ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸಲಕರಣೆಗಳನ್ನು ಬಳಸಿ ಕಾಂಕ್ರೀಟ್ ಮಿಕ್ಸರ್‌ನಿಂದ ಕೈ ಹೊರತಗೆದರು.ಬಳಿಕ ಅವರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನು ಕೊಡಿಸಲಾಯಿತು.

ಅಗ್ನಿಶಾಮಕ ಇಲಾಖೆಯ ಅಧಿಕಾರಿ ಬಸವರಾಜ ಬಿರಾದಾರ,ಪ್ರಮುಖ ಅಗ್ನಿಶಾಮಕ ಸುಭಾಷ ರಾಥೋಡ್ ,ಚಾಲಕ ಶಿವಾನಂದ ವಾಲೀಕಾರ,ಸಿಬ್ಬಂದಿ ತಮ್ಮಣ್ಣ ಗೌಡರ ,ಸಿದ್ದಣ್ಣ ಪೊಲೇಶಿ, ಅಗ್ನಿಶಾಮಕರು , ಬಸವರಾಜ್ ಭಜಂತ್ರಿ , ಸಂತೋಷ್ ಲಮಾಣಿ , ಶರಣು ಬಾಗೇವಾಡಿ , ಲಕ್ಷ್ಮಣ ಕರ್ನಾಲಗಿ,ಕಾರ್ತಿಕ ಅಜಮನಿ, ವಿರೂಪಾಕ್ಷಿ ಪೂಜಾರಿ, ಶಕೀಲ್ ಅವಟಿ, ರಂಗನಗೌಡ ಬಿರಾದಾರ,ರಾಜು ರಾಥೋಡ ಭಾಗಿಯಾಗಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ