Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಆಗಸ್ಟ್ ತಿಂಗಳಿನ ಸಂಭ್ರಮ (Celebration) ಶನಿವಾರದ ಚಟುವಟಿಕೆಗಳು ಜರುಗಿದವು.

ಮಕ್ಕಳ ವಿಶಿಷ್ಟ ಕೌಶಲ ಅಭಿವೃದ್ಧಿಗಾಗಿ ಅರಿವು ಅನುಭವ ಅವಲೋಕನಗಳ ಮೂಲಕ ಜ್ಞಾನ ಪಡೆಯುವುದು ಇದರ ಮೂಲ ಉದ್ದೇಶ. ಶಾಲೆಯ ಹೊರಗಿನ ಅನುಭವಗಳನ್ನು ಚಟುವಟಿಕೆ ಗಳ ಮೂಲಕ ಒದಗಿಸಲು ವೇದಿಕೆಯಾಗಿದೆ.

Join Out Telegram: https://t.me/dcgkannada

ಪ್ರತಿ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ ರಹಿತ ದಿನ ಎಂದು ಆಚರಿಸಲು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸು ಮಾಡಿದೆ. ವರ್ಷದಲ್ಲಿ ಹತ್ತು ದಿನ ವಿವಿಧ ವಿಷಯಗಳ ಮೇಲೆ ಮಕ್ಕಳಿಗಾಗಿಯೇ ಮಕ್ಕಳಿಂದ ಸನ್ನಿವೇಶ ಸೃಷ್ಟಿಸಿ ಕೌಶಲ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಇಲ್ಲಿ ನಡೆಯುತ್ತಿದೆ.

ಈ ತಿಂಗಳಿನ ಆಧುನಿಕ ತಂತ್ರಜ್ಞಾನ ಸಾಧನಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ವಿಷಯದ ಕುರಿತು ಚಟುವಟಿಕೆಗಳು ನಡೆದವು. ನಲಿ ಕಲಿ, ನಾಲ್ಕು ಮತ್ತು ಐದು ಹಾಗೂ ಆರು ಮತ್ತು ಏಳು ತರಗತಿಯ ಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ನೀವೇನು ಬಲ್ಲಿರಿ? ಬನ್ನಿ ಚಿತ್ರ ಬಿಡಿಸೋಣ, ನಟಿಸು – ಕಲಿ ಚಟುವಟಿಕೆಗಳನ್ನು ನಿರ್ವಹಿಸಿದರು.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಮಕ್ಕಳು ಉತ್ತಮವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ, ಕೌಶಲವನ್ನು ಹಂಚಿಕೊಂಡರು. ಸಂಭ್ರಮ (Celebration) ಶನಿವಾರದ ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವನ್ನು ಪಡೆದು, ಕಲಿಕೆ ಹಾಗೂ ಬದುಕಿನಲ್ಲಿ ಅನ್ವಯಿಸಿಕೊಳ್ಳಬೇಕು ಎಂದು ಮಾರ್ಗದರ್ಶಿ ಶಿಕ್ಷಕರು ಅಭಿಪ್ರಾಯಪಟ್ಟರು.

ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಮಾತೆ ವಿ ಬಿ ಕುಂಬಾರ, ಮಾರ್ಗದರ್ಶಿ ಶಿಕ್ಷಕರಾದ ಜ್ಯೋತಿ, ಜಿ ಆರ್ ನದಾಫ್, ಶಿವಾನಂದ ಬಿ, ಬಸವರಾಜ ಬಲಕುಂದಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿಕಪ್ಪರದ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ಕೊನೆಯಲ್ಲಿ ಕಾರ್ಯಕ್ರಮದ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ