ಮುದ್ದೇಬಿಹಾಳ : ಜಾತ್ಯಾತೀತ ಜನತಾದಳದಿಂದ ಸದಸ್ಯತ್ವ ಅಭಿಯಾನ ಹಾಗೂ ಬೂತ್ ಮಟ್ಟದ ಸಮಿತಿಯ ಉದ್ಘಾಟನಾ ಕಾರ್ಯಕ್ರಮ ಸೆ.26 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭಿಯಾನದ ಉದ್ಘಾಟನೆಗೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್‌ಕಮೀಟಿ ಅಧ್ಯಕ್ಷ,ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶಬಾಬು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷ ಬೇರು ಮಟ್ಟದಿಂದ ಗಟ್ಟಿಯಾದರೆ ಮಾತ್ರ ಜೆಡಿಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಲ್ಲ ಸಮುದಾಯಗಳ ಜನರನ್ನು ಒಳಗೊಂಡು ನೋಂದಣಿ ಮಾಡುವ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಿಸಿಕೊಳ್ಳಲು ಆಂತರಿಕವಾಗಿ ಸದಸ್ಯತ್ವ ಅಭಿಯಾನ ಚುರುಕುಗೊಳಿಸಲು ಹಾಗೂ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಲು ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ ಹೊಸಬರನ್ನು ಪಕ್ಷಕ್ಕೆ ಕರೆತರುವ ಉದ್ದೇಶದಿಂದ ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಪ್ರಾಮಾಣಿಕ ಸದಸ್ಯರನ್ನು ನೋಂದಣಿ ಮಾಡಿಸುವ ಪ್ರತಿಜ್ಞೆಯನ್ನು ಕಾರ್ಯಕರ್ತರು ಪಕ್ಷದ ವರಿಷ್ಠರ ಮುಂದೆ ಮಾಡಬೇಕು ಎಂದು ಹವಾಲ್ದಾರ್ ತಿಳಿಸಿದ್ದಾರೆ.
ಯಾರು ಪಕ್ಷದ ಪರವಾಗಿ ದುಡಿಯುತ್ತಾರೆ. ಮುಂದಿನ ಚುನಾವಣೆಯ ನಿಮ್ಮ ಟಿಕೆಟ್ ನಿಮ್ಮ ಮತಕ್ಷೇತ್ರದಲ್ಲಿ ಎಷ್ಟು ಜನರಿಗೆ ಸದಸ್ಯತ್ವದ ನೋಂದಣಿ ಮಾಡಿಸಿದ್ದಾರೆ ಎಂಬುದರ ಮೇಲೆ ನಿರ್ಧಾರವಾಗುವ ಸಾಧ್ಯತೆಗಳಿದ್ದು ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಅವರು ತಿಳಿಸಿದ್ದಾರೆ.
ಇದನ್ನು ಓದಿ: ಸಚಿವರ ಬಳಿ ನಿಯೋಗಕ್ಕೂ ಸಿದ್ಧ-ಸಿ.ಬಿ.ಅಸ್ಕಿ