ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು.

ಸಾಲದ ಬಾಧೆ ತಾಳದೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ(ಬೊಮ್ಮಣಗಿ)ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗ ಅವರು ಮಾತನಾಡಿದರು.ಈ ಸರ್ಕಾರದಲ್ಲಿ ಅಧಿಕಾರಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.ರೈತ ಆತ್ಮಹತ್ಯೆ ವಿಷಯ ತಿಳಿದ ತಕ್ಷಣ ತಹಶೀಲ್ದಾರ್‌ರು, ಪಿಎಸ್‌ಐ,ಕೃಷಿ ಇಲಾಖೆ ಅಧಿಕಾರಿ ಭೇಟಿ ನೀಡಿ ವರದಿ ನೀಡಬೇಕು.ಆದರೆ ಈವರೆಗೂ ಅಧಿಕಾರಿಗಳು ಭೇಟಿ ನೀಡದೆ ಇರುವುದು ಈ ಕ್ಷೇತ್ರದ ದುರಂತ ಎಂದರು.

ನಾನಿಲ್ಲಿ ರಾಜಕಾರಣ ಮಾಡುವುದಕ್ಕೆ ಬಂದಿಲ್ಲ.ರೈತ ಆತ್ಮಹತ್ಯೆ ಮಾಡಿಕೊಂಡಾಗ ಕನಿಷ್ಠ ಪಕ್ಷ ಅವರ ಮನೆಗೆ ತೆರಳಿ ಸಾಂತ್ವನ ಹೇಳುವ ಕೆಲಸ ಮಾಡಿ ಸರ್ಕಾರದಿಂದ ಬರುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರೆ ಅವರಿಗೆ ಧೈರ್ಯ ಬರುತ್ತಿತ್ತು.ಆದರೆ ಇಂತಹ ಕೆಲಸ ಮಾಡದೇ ಇರುವ ಜನಪ್ರತಿನಿಧಿ ಇರುವುದು ಜನತೆಯ ದುರ್ದೈವ.ಜನತೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ 6.50 ಲಕ್ಷ ರೂ.ಸಾಲ ವಿವಿಧ ಬ್ಯಾಂಕುಗಳಲ್ಲಿದೆ.ಅತಿವೃಷ್ಟಿಯಿAದ ಬೆಳೆದಿದ್ದ ಬೆಳೆ ಫಸಲು ಕೈಗೆ ಬಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರೈತರು ದುಡುಕಿನ ನಿರ್ಧಾರ ತಗೆದುಕೊಳ್ಳಬಾರದು ಎಂದು ನಡಹಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗ ಸುಲ್ಲಳ್ಳಿ, ಮಾಜಿ ಸೈನಿಕ ನಾಗಲಿಂಗಯ್ಯ ಮಠ, ವಕೀಲ ಪಿ.ಎಲ್.ಬೊಮ್ಮಣಗಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಂ.ಎಸ್.ಕನ್ನೂರ,ರೈತನ ಪತ್ನಿ ಬೋರಮ್ಮ ಗೌಡರ,ಮೃತ ರೈತನ ಮಕ್ಕಳು ಇದ್ದರು.

ರೈತನ ಒಬ್ಬ ಮಗಳಿಗೆ ವಿವಾಹ ನಿಶ್ಚಯವಾಗಿದ್ದು ಮದುವೆಯ ಸಮಯದಲ್ಲಿ ನೆರವು ನೀಡುವುದಾಗಿ ತಿಳಿಸಿದರು.ಆತ್ಮಹತ್ಯೆಗೆ ಶರಣಾದ ರೈತನ ಮಕ್ಕಳಿಗೆ ಶಿಕ್ಷಣ ಉಚಿತವಾಗಿ ನೀಡಬೇಕು.ಪತ್ನಿಗೆ ಮಾಶಾಸನ ನೀಡಬೇಕು.ರೈತನಿಗೆ ತ್ವರಿತವಾಗಿ ಪರಿಹಾರ ದೊರಕದೆ ಇದ್ದಲ್ಲಿ ನಾನು ಹೋರಾಟದ ದಾರಿv ತುಳಿಯಬೇಕಾಗುತ್ತದೆ.ಇದಕ್ಕೆ ಆಸ್ಪದ ಮಾಡಿಕೊಡಬೇಡಿ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ