HD Kumaraswamy thundered that a hundred Siddaramaiahs should come to arrest me

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

Ad
Ad

ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಸವಾಲು ಹಾಕಿದರು.

Ad
Ad

Join Our Telegram: https://t.me/dcgkannada

ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ಕೊಟ್ಟರು.

ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು HD Kumaraswamy ವಾಗ್ದಾಳಿ ನಡೆಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಮೇಲಿನಂತೆ ಹೇಳಿಕೆ ನೀಡಿದ್ದರು.

ಇದಕ್ಕೆ ಖಾರವಾಗಿ ತಿರುಗೇಟು ಕೊಟ್ಟ ಸಚಿವರು, ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ ಎಂದು ಹೇಳಿದರು.

ಇದನ್ನೂ ಓದಿ: CM vs HDK: ಕುಮಾರಸ್ವಾಮಿ ಬಂಧನ ಮಾಡ್ತೇವೆ ಎಂದ ಸಿಎಂ.. ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ ಎಂದ ಕೇಂದ್ರ ಸಚಿವ!

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ