Health care and higher education should be free: Minister Santosh Lad

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ

ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.

ಧಾರವಾಡದ ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಮಟ್ಟದ ಶಿಕ್ಷಣವನ್ನು ನೀಡಬೇಕಾದಲ್ಲಿ, ಬೇಸಿಕ್ ಪಠ್ಯಪುಸ್ತಕಗಳನ್ನು ನವೀಕರಿಸಬೇಕು. ಮಧ್ಯಮ ವರ್ಗದವರು ಶಿಕ್ಷಣಕ್ಕೆ ಅತಿ ಹೆಚ್ಚು ಹಣವನ್ನು ವ್ಯಯ ಮಾಡುತ್ತಿದ್ದಾರೆ. ಬರುವ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಎಂದು ಅಭಿಪ್ರಾಯಪಟ್ಟ ಸಚಿವರು, ಸಣ್ಣ ಸಣ್ಣ ಉದ್ಯಮ ಕೈಗಾರಿಕೆಗಳು ಅತಿ ಹೆಚ್ಚು ಅವನತಿ ಆಗುತ್ತಿವೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹಣಕಾಸಿನ ನೆರವು ನೀಡಬೇಕು ಎಂದರು.

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಎಂ ಗೋವಿಂದರಾವ್ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸು ಮಾಡುವ ಹಿನ್ನೆಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿದರು.

ಸಂವಾದ ಸಭೆಯಲ್ಲಿ ತಜ್ಞರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ಕರ್ನಾಟಕ ಚೇಂಬರ ಆಪ್ ಕಾಮರ್ಸ್ ಅಧ್ಯಕ್ಷ ಸಂಶಿಮಠ, ಕಾರ್ಯದರ್ಶಿ ರವೀಂದ್ರ ಬಳಿಗಾರ, ಸದಸ್ಯ ಹಾಗೂ ಉದ್ಯಮಿ ಮಹೇಂದ್ರ ಸಿಂಘೀ, ಹಿರಿಯ ವಕೀಲ ಸೋಮಶೇಖರ ಜಾಡರ, ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಡಾ.ಎಸ್.ಎಂ.ಶಿವಪ್ರಸಾದ, ಸಿಎಂಡಿಆರ್ ಮಾಜಿ ನಿರ್ದೇಶಕ ಡಾ.ಅಣ್ಣಿಗೇರಿ, ಮಹಿಳಾ ಹೋರಾಟಗಾರ್ತಿ ಶಾರದಾ ಗೋಪಾಲ, ಉದ್ಯಮಿ ಜಗದೀಶ ಹಿರೇಮಠ, ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥೆ ಓಟ್ಟಿಲಿ ಅನ್ಬನ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಿತಿ ಸದಸ್ಯರಾದ ಡಾ. ಸೂರ್ಯನಾರಾಯಣ ಎಂ.ಎಚ್., ಡಾ. ಎಸ್.ಟಿ. ಬಾಗಲಕೋಟ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಅವರು ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಆರ್ಥಿಕ ತಜ್ಞರು ಭಾಗವಹಿಸಿದ್ದರು.

ರೈತರಿಗೆ ಬೀಜ ವಿತರಣೆ : ಸಚಿವ ಲಾಡ್‌ ಅವರು, ಹುಬ್ಬಳ್ಳಿಯ ಶಿರಗುಪ್ಪ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬೀಜ ವಿತರಣೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರವಾಡ ಜಿಲ್ಲೆಯ‌ ಅಣ್ಣಿಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಲಾಡ್‌ ಅವರು ಉಪಾಹಾರ ಸೇವಿಸಿದರು. ಈ ವೇಳೆ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.‌

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ