Health damage due to drugs

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮುದ್ದೇಬಿಹಾಳ : ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಅಸ್ವಸ್ಥರಾಗಿ ಸಮಾಜದಲ್ಲೂ ಕೆಟ್ಟ ಹೆಸರು ತಂದುಕೊಳ್ಳಬೇಕಾಗುತ್ತದೆ ಎಂದು ಸಿಪಿಐ ಮೊಹ್ಮದ ಫಸಿವುದ್ದೀನ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪೊಲೀಸ್ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಸಾಗಣೆ ವಿರುದ್ಧ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಯಾನ್ಸರ್ ಅಂತಹ ಮಾರಕ ಕಾಯಿಲೆ ಮಾದಕ ವಸ್ತುಗಳಿಂದ ಬರುತ್ತದೆ. ಮಾನವನಿಗೆ ದೈಹಿಕ ನ್ಯೂನ್ಯತೆ ತರುತ್ತದೆ. ನಶೆ ತರುವ ಪದಾರ್ಥಗಳತ್ತ ವಿದ್ಯಾರ್ಥಿಗಳು ಕಣ್ಣು ಹಾಯಿಸಬೇಡಿ ಎಂದರು.

ತಹಸೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮಾದಕ ವಸ್ತುಗಳ ವಿದ್ಯಾರ್ಥಿ ಜೀವನದಲ್ಲಿ ಅವರ ಭವಿಷ್ಯವನ್ನೇ ಹಾಳು ಮಾಡುತ್ತವೆ. ಅಂತಹ ದುರಭ್ಯಾಸಗಳಿಂದ ದೂರವಿರುವುದು ಒಳಿತು ಎಂದರು.

ಡಾ.ಸತೀಶ ತಿವಾರಿ, ತಾಪಂ ಅಧಿಕಾರಿ ಪಿ.ಎಸ್.ಕಸನಕ್ಕಿ, ಬಿಇಒ ಬಿ.ಎಸ್.ಸಾವಳಗಿ, ಅಕ್ಷರ ದಾಸೋಹ ಅಧಿಕಾರಿ ಎಂ. ಎಂ. ಬೆಳಗಲ್, ಪಿಎಸ್‌ಐ ಸಂಜಯ ತಿಪರೆಡ್ಡಿ, ಸರ್ಕಾರಿ ಪ್ರೌಢಶಾಲೆ ಮುಖ್ಯಗುರು ಎಂ. ಎಸ್. ಕವಡಿಮಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯಗುರುಗಳು ಇದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಕುರಿತು ಜಾಗೃತಿ ಜಾಥಾ ನಡೆಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು