
ರಾಯಚೂರು: 8ನೇ ತರಗತಿ ಬಾಲಕನೊಬ್ಬ ಲೋ ಬಿಪಿಯಿಂದ ಹೃದಯಘಾತವಾಗಿ (Heart attack) ಶಾಲೆಯಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿರುವ ವೇಳೆ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿನ ಖಾಸಗಿ ಶಾಲೆಯ 8ನೇ ತರಗತಿ ಬಾಲಕ ತರುಣ್ ಅತ್ತನೂರು(14) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಎಂದಿನಂತೆ ಶಾಲೆಗೆ ತೆರಳಿದ್ದ ತರುಣ್ ಗೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಸಿರಿವಾರ ಪಟ್ಟಣದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ.
ಪ್ರಾಥಮಿಕ ಚಿಕಿತ್ಸೆಯ ಬಳಿಕ, ತೀವ್ರ ಅಸ್ವಸ್ಥಗೊಂಡಿದ್ದಂತ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಮಾರ್ಗಮಧ್ಯದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸಿರಿವಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!
ಈವರೆಗೆ ವಯಸ್ಕರು, ವಯೋವೃದ್ಧರಲ್ಲಿ ಕಾಣಿಸಿಕೊಳ್ಳುತ್ತಿದ್ದಂತ ರಕ್ತದೊತ್ತಡ, ಈಗ ಮಕ್ಕಳಲ್ಲೂ ಆರಂಭಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.