Hindu activist killed in Mangalore

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ, ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂದು ಹೇಳಲಾಗಿದೆ.

ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಹಾಸ್ ಶೆಟ್ಟಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ.

2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಹಿನ್ನೆಲೆ ಮಂಗಳೂರಿನ ಎಜೆ ಆಸ್ಪತ್ರೆ ಬಳಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮಂಗಳೂರಿನ ಎಜೆ ಆಸ್ಪತ್ರೆಯ ಬಳಿ ಹಿಂದೂ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಎಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಮೊದಲಾದವರು ಆಗಮಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ