ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು.


ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಅಸ್ಕಿ ಫೌಂಡೇಶನ್ ಪ್ಲಾಂಟ್‌ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಿಎಂ ಸಿದ್ಧರಾಮಯ್ಯನವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಈ ಸಲದ ಆಯ್ಕೆ ಪಟ್ಟಿಯಲ್ಲಿ 50 ಮಹಿಳೆಯರು, 50 ಪುರುಷರನ್ನು ಸುವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯ.ಇತಿಹಾಸದಲ್ಲಿ ಇದೇ ಮೊದಲು ಒಂದು ರಾಜ್ಯದಲ್ಲಿ ಪ್ರಶಸ್ತಿ ಕೊಡುವ ವಿಚಾರದಲ್ಲಿ ಸರ್ಕಾರವೊಂದು ಪುರುಷ-ಮಹಿಳೆ ಸಮಾನರು ಎಂಬುದನ್ನು ಸಾರಿದೆ ಎಂದು ಅವರು ತಿಳಿಸಿದರು.


ವಿಜಯಪುರ ಜಿಲ್ಲೆಯ ಡಾ.ಎಲ್.ಎಚ್.ಬಿದರಿ, ಜಾನಪದ ಕಲಾವಿದ ಬಸವರಾಜ ಹಾರಿವಾಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದಕ್ಕೆ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅಸ್ಕಿ ಅವರ ಪುತ್ರಿ ಪ್ರಿಯಾ ಅಸ್ಕಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಹೊಸಮನಿ, ರವಿ ಮೇಟಿ , ಮಡಿವಾಳ ನಾಯ್ಕೋಡಿ ದ್ದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ